ಮಹಿಳೆಯರ ಸೀಟಲ್ಲಿ ಕೂತ ಪುರುಷಗೆ ದಂಡ
ಬೆಂಗಳೂರು: ಪುರುಷರೇ, ಬಿಎಂಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಂಡೀರಿ ಜೋಕೆ..!
ಏಕೆಂದರೆ, ಬಿಎಂಟಿಸಿ ಅಧಿಕಾರಿಗಳು ಬೆಂಗಳೂರು ನಗರ ಮತ್ತು ಹೊರವಲಯದಲ್ಲಿ ಕೇವಲ 3 ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಹಿಳೆಯರಿಗೆ ಮೀಸಲಾದ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 433 ಪುರುಷರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾ.18ರಿಂದ ಮಾ.20 ರವರೆಗೆ ನಗರ ಮತ್ತು ಹೊರ ವಲಯದಲ್ಲಿ ಒಟ್ಟು 4281 ವಾಹನಗಳನ್ನು ತಪಾಸಣೆಗೆ ಒಳಪಡಿಸಿರುವ ಅಧಿಕಾರಿಗಳು 433 ಪುರುಷ ಪ್ರಯಾಣಿಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಒಟ್ಟು 43,300 ದಂಡ ವಿಧಿಸಿರುತ್ತಾರೆ.
ಜತೆಗೆ, ಚೀಟಿ ರಹಿತವಾಗಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರನ್ನು ಪತ್ತೆ ಹಚ್ಚಿ ತಪ್ಪಿತಸ್ಥರಿಂದ 1,28,050 ದಂಡ ವಿಧಿಸಿರುವುದಲ್ಲದೇ ಆ ಸಂಬಂಧ 768 ನಿರ್ವಾಹಕರ ಮೇಲೂ ಪ್ರಕರಣ ದಾಖಲಿಸಿರುತ್ತಾರೆ. ಅಲ್ಲದೆ, ತಪಾಸಣೆ ವೇಳೆ ಪ್ರಯಾಣಿಕರೊಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದರಿಂದ ಆ ಪ್ರಯಾಣಿಕರ ವಿರುದ್ಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ರೀತ್ಯಾ ಕ್ರಮಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.