ಯಾವ ಆದೇಶ ಪಾಲಿಸುವುದು?; ಅಬ್ರಾಹಂ ಅರ್ಜಿ
ಬೆಂಗಳೂರು: ಸಿವಿಲ್ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸುವ ಸಂಬಂಧ ದೂರುದಾರರು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕೋ ಅಥವಾ ಹೈಕೋರ್ಟ್ ಆದೇಶವನ್ನು ಪಾಲಿಸಬೇಕೋ ಎನ್ನುವ ಬಗ್ಗೆ ಗೊಂದಲವಿದ್ದು ಇದನ್ನು ಪರಿಹರಿಸಿ ಎಂದು ಲೋಕಾಯುಕ್ತ ನ್ಯಾಯಾಲಯಕ್ಕೆ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಾಹಂ ಮನವಿ ಮಾಡಿ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣವೊಂದರಲ್ಲಿ ಸರ್ಕಾರಿ ಸಿಬ್ಬಂದಿಯ ವಿಚಾರಣೆಗೆ ಮುನ್ನ ಸಂಬಂಧಪಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಅಲ್ಲದೇ ಇಂತಹ ಪ್ರಕರಣಗಳಲ್ಲಿ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಅನುಮತಿ ಪತ್ರ ಪಡೆಯದ ಆರೋಪಗಳ ಬಗ್ಗೆ ದಾಖಲೆ ಪರಿಶೀಲನೆಯನ್ನು ಕೂಡಾ ಲೋಕಾಯುಕ್ತ ನ್ಯಾಯಾಲಯ ನಡೆಸಬಾರದು ಎಂದು ನಿರ್ದೇಶನ ನೀಡಿತ್ತು. ಸರ್ಕಾರಿ ನೌಕರರ ವಿರುದ್ಧ ತನಿಖೆಗೆ ಆದೇಶಿಸಲು ಇಲಾಖೆ ಮುಖ್ಯಸ್ಥರ ಅನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಹೀಗಾಗಿ ಯಾವುದನ್ನು ಪಾಲನೆ ಮಾಡಬೇಕು ಎನ್ನುವ ಬಗ್ಗೆ ಗೊಂದಲವಿದ್ದು ಪರಿಹರಿಸಿ ಎಂದು ಟಿ.ಜೆ. ಅಬ್ರಾಹಂ 6 ಪ್ರಶ್ನೆಗಳನ್ನು ಕೇಳಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.