ಬೆಂಗಳೂರು ನಗರ

ಆಕಸ್ಮಿಕ ಗುಂಡು ಹಾರಿ ಕೆಎಸ್‌ಆರ್‌ಪಿ ಪೇದೆ ಸಾವು

Parashurama

ಬೆಂಗಳೂರು: ತರಬೇತಿ ವೇಳೆ ಆಕ್ಮಸಿಕವಾಗಿ ಗುಂಡು ಹಾರಿ ಕರ್ನಾಟಕ ರಾಜ್ಯ ಮೀಸಲು ಪಡೆ ಪೇದೆಯೊಬ್ಬ ಸಾವನ್ನಪ್ಪಿರುವ ಘಟನೆ ಕಸವನಹಳ್ಳಿ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಸತೀಶ್ (27) ಮೃತ ಪೇದೆ. ಶನಿವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಬಂದೂಕು ತರಬೇತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಆಗ ಬಂದೂಕನ್ನು ಸ್ವಚ್ಚಗೊಳಿಸುವ ಕಾರ್ಯವೂ ನಡೆಯುತ್ತಿತ್ತು ಎನ್ನಲಾಗಿದೆ. ಈ ವೇಳೆ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಎರಡು ಗುಂಡುಗಳು ಸತೀಶನ ದೇಹ ಸೇರಿವೆ. ಆದರೆ ಆಕಸ್ಮಿಕವಾಗಿ ಗುಂಡು ಹಾರಿದೆಯೋ ಅಥವಾ ಸತೀಶ್ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೋ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲ. ಗುಂಡು ಹಾರಿದ ಬಳಿಕ ಪೇದೆಯನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಅಷ್ಟೊತ್ತಿಗಾಗಲೇ ಸತೀಶ್ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದರು. ಶವಪರೀಕ್ಷೆಯ ಬಳಿಕ ಸತೀಶ್‌ನ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ಕೊಂಡೊಯ್ಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT