ಬೆಂಗಳೂರು ನಗರ

ಮೋಜಿಗಾಗಿ ಕಳ್ಳತನ; ಮೂವರ ಬಂಧನ

ಕ.ಪ್ರ.ವಾರ್ತೆ ಬೆಂಗಳೂರು ನ. 13-
ಮೋಜಿನ ಜೀವನಕ್ಕಾಗಿ ದ್ವಿಚಕ್ರ ಕಳ್ಳತನ ಮಾಡುತ್ತಿದ್ದ ಮೂವರನ್ನು ಕೆ.ಆರ್.ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಕೆ.ಆರ್.ನಗರ ನಿವಾಸಿ ಪುನೀತ್ ರಾಜ್ (23), ರಾಮನಗರ ಜಿಲ್ಲೆ ಬಿಡದಿ ತಾಲೂಕಿನ ಶಾಂತರಾಜ್ (20) ಹಾಗೂ ಬೆಂಗಳೂರಿನ ಕಮಲಾನಗರ ನಿವಾಸಿ ಕೆ.ಆರ್.ಪೇಟೆ ಮೂಲದ ನಾಗರಾಜ್  (33) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 18 ಲಕ್ಷ ಬೆಲೆ ಬಾಳುವ 36 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಮುಖ ಆರೋಪಿ ಪುನೀತ್, ಅಭಿನಯ ಚಿತ್ರಮಂದಿರ ಬಳಿ ಇರುವ ರಾಜಶೇಖರ್ ಎಂಬುವವರಿಗೆ ಸೇರಿದ ಲಕ್ಷ್ಮಿ ವೆಂಕಟೇಶ್ವರ ಸಿನಿಮಾ ಹಂಚಿಕೆದಾರರ ಬಳಿ ಕೆಲಸ ಮಾಡುತ್ತಿದ್ದ. ಮೋಜಿನ ಜೀವನಕ್ಕಾಗಿ ಶಾಂತರಾಜ್ ಹಾಗೂ ನಾಗರಾಜ್ ಅವರೊಂದಿಗೆ ಸೇರಿ ಪುನೀತ್ ದ್ವಿಚಕ್ರ ವಾಹನ ಕಳ್ಳತನದಲ್ಲಿ ತೊಡಗಿದ್ದ. ಬಿಡದಿ, ರಾಮನಗರ, ಚನ್ನಪಟ್ಟಣ, ಮಂಡ್ಯ, ಮದ್ದೂರು ಬಸ್ ನಿಲ್ದಾಣ ಹಾಗೂ ಆಸ್ಪತ್ರೆಗಳ ಬಳಿ ನಿಲ್ಲಿಸಲಾಗಿರುವ ಬೈಕ್‌ಗಳನ್ನು ನಕಲಿ ಕೀ ಬಳಸಿ ಕದಿಯುತ್ತಿದ್ದರು. ಬಳಿಕ ನಾಗರಾಜು ಮೈಸೂರು ಜಿಲ್ಲೆ ಕೆ.ಆರ್.ನಗರ, ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಡಿಮೆ ಬೆಲೆ ಬೈಕ್‌ಗಳನ್ನು ದಾಖಲೆಗಳಿಲ್ಲದೇ ಮಾರಾಟ ಮಾಡುತ್ತಿದ್ದರು. ದಾಖಲೆಗಳನ್ನು ಕೇಳುವವರಿಗೆ ಕೆಲವು ದಿನಗಳ ಬಳಿಕ ನೀಡುವುದಾಗಿ ನಂಬಿಸಿ ಮಾರಾಟ ಮಾಡುತ್ತಿದ್ದರು. ಆರೋಪಿ ಶಾಂತರಾಜು ಈ ಹಿಂದೆ ದ್ವಿಚಕ್ರ ವಾಹನ ಕಳ್ಳತನದಲ್ಲಿ ಭಾಗಿಯಾಗಿ ಪೊಲೀಸರಿಗೆ ಸಿಕ್ಕಿ ಬಿದ್ದು ಜೈಲು ಸೇರಿದ್ದ. ಬಿಡುಗಡೆಯಾಗಿ ಬಂದ ಬಳಿಕ ಮತ್ತೆ ಕಳ್ಳತನದಲ್ಲಿ ತೊಡಗಿದ್ದ ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್