ಬೆಂಗಳೂರು ನಗರ

ನವ ವಿವಾಹಿತೆ ಆತ್ಮಹತ್ಯೆ

ಕ.ಪ್ರ.ವಾರ್ತೆ ಬೆಂಗಳೂರು ಅ. 22-
ವಿವಾಹಕ್ಕೆ ಮುನ್ನ ಹುಡುಗನಿಗೆ ವಯಸ್ಸಿನ ಬಗ್ಗೆ ಸುಳ್ಳು ಹೇಳಿದ್ದ ಗೃಹಿಣಿಯೊಬ್ಬರು ಸತ್ಯ ತಿಳಿದ ಮೇಲೆ ಉಂಟಾದ ನಿತ್ಯ ಜಗಳಕ್ಕೆ ಇತಿಶ್ರೀ ಹಾಡಲು ಜೀವನಕ್ಕೇ ಗುಡ್‌ಬೈ ಹೇಳಿದ್ದಾರೆ.
ಕನಕಪುರ ರಸ್ತೆ ಕೋಣನಕುಂಟೆ ಕ್ರಾಸ್ ಸುಪ್ರಜಾನಗರದ ನಿವಾಸಿ ಪ್ರತಿಮಾ (33) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪ್ರತಿಮಾ ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಪ್ರತಿಮಾ 8 ತಿಂಗಳ ಹಿಂದೆ ಖಾಸಗಿ ಕಂಪನಿ ಉದ್ಯೋಗಿ ವಿನೋದ್‌ಕುಮಾರ್ ಎಂಬುವರನ್ನು ವಿವಾಹವಾಗಿದ್ದರು.

'ನನ್ನ ಸಾವಿಗೆ ನಾನೇ ಕಾರಣ. ಮದುವೆಗೆ ಮುಂಚೆ ವಿನೋದ್‌ಕುಮಾರ್‌ನಿಂದ ನಾನು ಒಂದು ಸತ್ಯ ಮುಚ್ಚಿಟ್ಟಿದ್ದೆ. ವಯಸ್ಸಿನಲ್ಲಿ ಪತಿಗಿಂತ ನಾನೇ ದೊಡ್ಡವಳು ಎನ್ನುವ ವಿಚಾರ ಹೇಳಿರಲಿಲ್ಲ. ಆದರೆ ಮದುವೆಯಾದ ಬಳಿಕ ಈ ವಿಷಯ ಪತಿ ಮುಂದೆ ಹೇಳಿಕೊಂಡಾಗ ನಿತ್ಯ ನಮ್ಮಿಬ್ಬರ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸರಗೊಂಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ' ಎಂದು ಪ್ರತಿಮಾ ಮರಣ ಪತ್ರ ಬರೆದಿಟ್ಟಿದ್ದಾರೆ.ರಾತ್ರಿ ಬೆಡ್‌ರೂಮಿನಲ್ಲಿ ಮಲಗಿದ್ದ ಪ್ರತಿಮಾ, ಮಧ್ಯರಾತ್ರಿ ಎದ್ದು ಹಾಲ್‌ಗೆ ಬಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರತಿಮಾ ಅವರ ಮಾವ ಮಂಗಳವಾರ ಬೆಳಿಗ್ಗೆ ಎದ್ದು ಹಾಲ್‌ಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂಟಿ ಮಹಿಳೆ ಆತ್ಮಹತ್ಯೆ
ಪತಿಯಿಂದ ದೂರವಾಗಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರಗನಹಳ್ಳಿ ಅಣ್ಣಪ್ಪ ಬಡಾವಣೆಯಲ್ಲಿ ನಡೆದಿದೆ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಉಮಾದೇವಿ (45) ಆತ್ಮಹತ್ಯೆ ಮಾಡಿಕೊಂಡವರು. ಅಣ್ಣಪ್ಪ ಬಡಾವಣೆಯ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಉಮಾದೇವಿ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು ಮಂಗಳವಾರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದ ಮನೆ ಬಾಗಿಲು ಬಡಿದು ನೋಡಿದಾಗ ಉಮಾದೇವಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕೋಲಾರ ಮೂಲದ ಉಮಾದೇವಿ ಹಲವು ವರ್ಷಗಳ ಹಿಂದೆಯೇ ಪತಿಯಿಂದ ದೂರವಾಗಿದ್ದರು. ಇವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಎಲ್ಲರ ಮದುವೆಯಾಗಿದ್ದುಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಕೋಲಾರದಲ್ಲಿರುವ ಉಮಾದೇವಿ ಮಕ್ಕಳು ನಗರಕ್ಕೆ ಬಂದ ಬಳಿಕ ಆತ್ಮಹತ್ಯೆಗೆ ಕಾರಣ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!