ಬೆಂಗಳೂರು ನಗರ

ಗೊ.ರು.ಚಗೆ 85, 20ಕ್ಕೆ ಅಭಿನಂದನೆ

ಬೆಂಗಳೂರು: ಕೇಂದ್ರ ಸಂಗೀತ ಮತ್ತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಾಗೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೊ.ರು. ಚನ್ನಬಸಪ್ಪನವರಿಗೆ 85 ವರ್ಷ ತುಂಬಿರುವ ಸಂದರ್ಭದಲ್ಲಿ ಗೊ.ರು.ಚ. ಅಭಿನಂದನಾ ಸಮಿತಿ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಜು. 20 ರಂದು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.
ಗೊ.ರು.ಚ ಅವರ ಅಭಿನಂದನಾ ಸಮಾರಂಭದಲ್ಲಿ ನಾಟಕ, ವಚನ ಗಾಯನ ಹಾಗೂ ಜನಪದ ಗಾಯನ ಕಾರ್ಯಕ್ರಮಗಳೂ ನಡೆಯಲಿವೆ ಎಂದು ಸಮಿತಿ ಅಧ್ಯಕ್ಷ ಚಂದ್ರಕಾಂತ ಗುರಪ್ಪ ಬೆಲ್ಲದ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ತುಮಕೂರು ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು ಎಂದು ತಿಳಿಸಿದರು.
ಗೊ.ರು.ಚ ಅವರ 6 ಕೃತಿಗಳು ಮತ್ತು ರಾಜ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಸಿ. ವೀರಣ್ಣ ಸಂಪಾದಿತ 'ತವನಿಧಿ', ಜರಗನಹಳ್ಳಿ ಶಿವಶಂಕರ್ ಸಂಪಾದಿತ 'ಹಳ್ಳಿಯ ಬಳ್ಳಿ', ಗೊ.ರು. ಪರಮೇಶ್ವರಪ್ಪ ಸಂಪಾದಿತ 'ಗೊರುಚ-ಚಿತ್ರ ಜಗಲಿ' ಕೃತಿಗಳನ್ನು ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಹಾಗೂ ನಿವೃತ್ತ ಕುಲಪತಿ ಡಾ. ಎಂ.ಎಂ. ಕಲ್ಬುರ್ಗಿ ಬಿಡುಗಡೆ ಮಾಡುವರು ಎಂದು ತಿಳಿಸಿದರು.
ಸಚಿವರಾದ ಎಚ್.ಕೆ. ಪಾಟೀಲ್, ಮಹದೇವ ಪ್ರಸಾದ್ ಹಾಗೂ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ಅಥಿತಿಗಳಾಗಿ ಭಾಗವಹಿಸುವರು ಎಂದರು.
ಮಾಜಿ ಸಚಿವ ಡಾ.ಬಿ.ಎಲ್. ಶಂಕರ್, ಸಮಿತಿಯ ಕಾರ್ಯಾಧ್ಯಕ್ಷ ಕೊಂಡಜ್ಜಿ ಬ. ಷಣ್ಮಖಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ವಿ. ನಾಗರಾಜಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!