ಬೆಂಗಳೂರು ನಗರ

ಮಕ್ಕಳ ವಿರುದ್ಧದ ಅಪರಾಧ

ಬೆಂಗಳೂರು: ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಹಾಗೂ ಬೇಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ವಿರುದ್ಧದ ಹೋರಾಟಕ್ಕೆ ಬೆಂಬಲ ಘೋಷಿಸಿರುವ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಮಕ್ಕಳ ವಿರುದ್ಧ ನಡೆಯುವ ಅಪರಾಧ ಪ್ರಕರಣ ವಿಚಾರಣೆಗೆ ವಿಶೇಷ ಘಟಕ ಸ್ಥಾಪಿಸುವಂತೆ ಆಗ್ರಹಿಸಿದ್ದಾರೆ.
ಶಾಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣದಿಂದ ಯಾವುದೇ ಆರೋಪಿಗಳು ಹಾಗೂ ಶಾಲಾ ಆಡಳಿತ ಮಂಡಳಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ಅಚಾತುರ್ಯದ ಸಂಪೂರ್ಣ ಜವಾಬ್ದಾರಿ ಶಾಲೆ ಹೊರಬೇಕು ಎಂದಿರುವ ಅವರು, ನಿರ್ಲಕ್ಷ್ಯ ಮಾಡಿರುವ ಆಡಳಿತ ಮಂಡಳಿ ವಿರುದ್ಧ ಕ್ರಮ ಜರುಗುವವರೆಗೂ  ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಪ್ರಾಂಶುಪಾಲ, ಶಿಕ್ಷಕ ಹಾಗೂ ಆಡಳಿತ ಮಂಡಳಿಯು ಶಾಲಾ ಆವರಣದಲ್ಲಿ ನಡೆಯುವ ವಿಚಾರಕ್ಕೆ ಹೊಣೆ ಹೊಂದಿರಲೇಬೇಕು. ಬೇಜವಾಬ್ದಾರಿಯಿಂದ ವರ್ತಿಸುತ್ತಿರುವ ಶಾಲೆಯನ್ನು ಕೂಡಲೇ ಮುಚ್ಚಿ ರಾಜ್ಯ ಸರ್ಕಾರ ಅಲ್ಲಿರುವ ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಬೆಂಗಳೂರು ಮಹಿಳೆ ಹಾಗೂ ಮಕ್ಕಳಿಗೆ ಅಸುರಕ್ಷಿತವಾಗುತ್ತಿದೆ. ಅದರಲ್ಲೂ ಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಇತರ ಅಪರಾಧ ಪ್ರಕರಣ ಸಹಿಸಿಕೊಳ್ಳುವುದು ಕಷ್ಟವಾಗುತ್ತದೆ. ಅದರಲ್ಲೂ ಶಾಲೆಗಳಲ್ಲಿ ಇಂತಹ ವಿಕೃತಿಗಳು ನಡೆದರೆ ಉತ್ತರ ಕೊಡುವವರು ಯಾರು ಎಂದು ಪ್ರಶ್ನಿಸಿದ್ದಾರೆ.
ಶಾಲೆಗಳ ಮೇಲೆ ನಂಬಿಕೆ ಇಟ್ಟು ಮಕ್ಕಳನ್ನು ಪಾಲಕರು ಕಳುಹಿಸಿರುತ್ತಾರೆ. ಶಾಲೆಗಳು ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿಯಲ್ಲ ಎನ್ನುವುದು ಬೇಜವಾಬ್ದಾರಿ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಇಂತಹದೊಂದು ಪ್ರಕರಣ ನಡೆದಿತ್ತು. ಪಾಲಕರ ರಕ್ಷಣೆಗೆ ಸ್ವತಃ ನಾನೇ ಹೋಗಿದ್ದೆ. ಇದರ ಪರಿಣಾಮವಾಗಿ ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯ ನಿಯಂತ್ರಣ ಕಾಯಿದೆ ಮೂಲಕ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಈ ಸಂಬಂಧ ಗೃಹ ಸಚಿವರಿಗೂ ಪತ್ರ ಬರೆದಿದ್ದೆ ಎಂದು ಅವರು ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!