ಬೆಂಗಳೂರು ನಗರ

ಕೌಟುಂಬಿಕ ಕಲಹ: ಚಾಲಕ ಆತ್ಮಹತ್ಯೆ

ಬೆಂಗಳೂರು: ಚಾಲಕನೊಬ್ಬ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆಯಲ್ಲಿ ನಡೆದಿದೆ.
ನೇಪಾಳ ಮೂಲದ ಸುರೇಶ್ (30) ಆತ್ಮಹತ್ಯೆ ಮಾಡಿಕೊಂಡವ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದಂಪತಿ ನಡುವೆ ನಿತ್ಯ ಜಗಳವಾಗುತ್ತಿತ್ತು. ಮಂಗಳವಾರ ರಾತ್ರಿಯೂ ಮದ್ಯಪಾನ ಮಾಡಿ ಸುರೇಶ್ ಮನೆಗೆ ಬಂದಿದ್ದಾನೆ. ದುಡಿದ ಹಣವೆಲ್ಲ ಮದ್ಯಪಾನಕ್ಕೆ ಖರ್ಚು ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬೇಸರಗೊಂಡ ಪತ್ನಿ ಜಗಳ ಮಾಡಿದ್ದಾಳೆ. ಬಳಿಕ ಕೊಠಡಿಗೆ ತೆರಳಿದ ಸುರೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಗಳ ಮಾಡಿಕೊಂಡಾಗಲೆಲ್ಲಾ ಕೊಠಡಿಗೆ ತೆರಳಿ ಚಿಲಕ ಹಾಕಿಕೊಂಡು ಮಲಗುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಅಷ್ಟು ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಬೆಳಗ್ಗೆ ತುಂಬಾ ಹೊತ್ತಾದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು, ಅಕ್ಕಪಕ್ಕದ ಮನೆಯವರ ನೆರವಿನೊಂದಿಗೆ ಬಾಗಿಲು ಮುರಿದು ಒಳಪ್ರವೇಶಿಸಿದ್ದಾರೆ. ಸುರೇಶ್ ಬಾಯಿಯಿಂದ ನೊರೆ ಬರುತ್ತಿದ್ದು ಬೆಡ್ ಮೇಲೆ ಮೃತಪಟ್ಟಿದ್ದ.
ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!