ಬೆಂಗಳೂರು: ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್) ಮಾಜಿ ಅಧ್ಯಕ್ಷ ಪಿ.ನಾಗರಾಜ್ ಅವರು ಮತ್ತೊಮ್ಮೆ ಕೆಎಂಎಫ್ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾಗಿದ್ದಾರೆ.
ಇಂದು ನಡೆದ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾ ಅಧಿಕಾರಿಗಳು ಘೋಷಿಸಿದ್ದಾರೆ.
13 ನಿರ್ದೇಶಕ ಬಲದ ಕೆಎಂಎಫ್‌ನಲ್ಲಿ 9 ನಿರ್ದೇಶಕರು ಕಾಂಗ್ರೆಸ್ ಬೆಂಬಲಿತರಾಗಿದ್ದು, ಇವರಲ್ಲಿ ಬಹುತೇಕ ನಿರ್ದೇಶಕರು ನಾಗರಾಜ್ ಪರ ಇರುವುದರಿಂದ ಮತ್ತೆ ನಾಗರಾಜ್ ಅವರಿಗೆ ಅವಕಾಶ ನೀಡಲಾಗಿದೆ.
ಇಂದು ಬೆಳಗ್ಗೆ ಕೆಎಂಎಫ್ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಪಿ.ನಾಗರಾಜ್ ಅವರನ್ನು ಮೊದಲ ಅವಧಿಗೆ ಅಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಲಾಯಿತು. ಎರಡನೇ ಅವಧಿಗೆ ಹರಪನಹಳ್ಳಿ ಶಾಸಕ ಎಂ.ಪಿ.ರವೀಂದ್ರ ಅಧ್ಯಕ್ಷರಾಗಲಿದ್ದಾರೆ.