ಬೆಂಗಳೂರು: ಬೆಂಗಳೂರಿನಲ್ಲಿ ನಡೆದಿದ್ದ ನೇಪಾಳ ಮೂಲದ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ನೀಡಿದೆ.
ಪ್ರಕರಣವನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಿದ 14ನೇ ಫಾಸ್ಟ್‌ಟ್ಯ್ರಾಕ್ ನ್ಯಾಯಾಲಯ ಎಲ್ಲ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪ್ರಕರಣದ ಆರೋಪಿಗಳಾದ ಸಂತೋಷ್ (24 ವರ್ಷ), ಪ್ರದೀಪ್ (27 ವರ್ಷ), ವಿಕಾಸ್ (23 ವರ್ಷ) ಮತ್ತು ಪ್ರೀತಮ್ (19 ವರ್ಷ) ಎಂಬುವವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಎಲ್ಲ ಆರೋಪಿಗಳು ಡಾರ್ಜಲಿಂಗ್ ಮತ್ತು ಅಸ್ಸಾಂ ಮೂಲದವರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರಿನ ಹೆಚ್.ಎಸ್.ಆರ್.ಲೇ ಔಟ್‌ನಲ್ಲಿ ವಾಸವಿದ್ದ ನೇಪಾಳ ಮೂಲದ 27 ವರ್ಷದ ಅಮೃತ್ ಮತ್ತು ಆತನ ಪತ್ನಿ 26 ವರ್ಷದ ಜಾನಕಿಯನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೆಚ್‌ಎಸ್‌ಆರ್ ಲೇಔಟ್ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣವನ್ನು ತನಿಖೆ ನಡೆಸಿದ್ದ ಠಾಣೆಯ ಇನ್ಸ್‌ಪೆಕ್ಟರ್ ಎಲ್.ವೈ.ರಾಜೇಶ್ ಅವರು ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದರು.