ಬೆಂಗಳೂರು ನಗರ

ನೈತಿಕ ಪೊಲೀಸ್‌ಗಿರಿ ಮುಂದುವರಿದರೆ ಶ್ರೀರಾಮಸೇನೆ ನಿಷೇಧ: ಜಾರ್ಜ್

ನೈತಿಕ ಪೊಲೀಸ್‌ಗಿರಿ ಮುಂದುವರಿಸಿದರೆ ರಾಜ್ಯದಲ್ಲೂ ಶ್ರೀರಾಮ ಸೇನೆಯನ್ನು ನಿಷೇಧಿಸಲಾಗುವುದು...

ಬೆಂಗಳೂರು: ನೈತಿಕ ಪೊಲೀಸ್‌ಗಿರಿ ಮುಂದುವರಿಸಿದರೆ ರಾಜ್ಯದಲ್ಲೂ ಶ್ರೀರಾಮ ಸೇನೆಯನ್ನು ನಿಷೇಧಿಸಲಾಗುವುದು ಎಂದು ಗೃಹ ಸಚಿವ ಕೆ. ಜೆ ಜಾರ್ಜ್ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ಶ್ರೀರಾಮಸೇನೆ ನೈತಿಕ ಪೊಲೀಸ್ ಗಿರಿ ಮಾಡುತ್ತಿದೆ. ಅದನ್ನು ನಿಲ್ಲಿಸುವಂತೆ ಸೂಚನೆ ನೀಡಿದ್ದರೂ ಕೇಳಿಲ್ಲ. ಪರಿಸ್ಥಿತಿ ಹೀಗೆಯೇ ಮುಂದವರಿದರೆ ಸಂಘಟನೆ ನಿಷೇಧಿಸುವುದು ಅನಿವಾರ್ಯವಾಗುತ್ತದೆ ಎಂದರು.

ಸನ್ನಡತೆ ಆಧಾರದ ಮೇಲೆ ಕೈದಿಗಳನ್ನು ಬಿಡುಗಡೆ ಮಾಡುವ ವಿಚಾರದಲ್ಲಿ ಗೊಂದಲವಿಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖವಾಗಿದೆ.

ಸುಪ್ರೀಂ ಕೋರ್ಟ್ ನಿರ್ದೇಶನ ಸೂತ್ರಗಳ ಆಧಾರದ ಮೇಲೆಯೇ ಬಿಡುಗಡೆ ಪ್ರಕ್ರಿಯೆ ನಡೆಯುತ್ತದೆ. ರಾಜ್ಯಪಾಲರ ಜತೆ ಸರ್ಕಾರ ಈ ವಿಚಾರದಲ್ಲಿ ಭಿನ್ನಮತ ಸೃಷ್ಟಿಸಿಕೊಂಡಿಲ್ಲ ಎಂದರು.

ರಾಜ್ಯ ವಿಭಜನೆ ಮಾಡುವಂತೆ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ ಮಾತ್ರಕ್ಕೆ ಕರ್ನಾಟಕ ಇಬ್ಭಾಗವಾಗುವುದಕ್ಕೆ ಸಾಧ್ಯವಿಲ್ಲ. ಅವರ ಹೇಳಿಕೆಗೆ ಯಾರು ಮಹತ್ವ ನೀಡಬೇಕಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT