ಬೆಂಗಳೂರು ನಗರ

ಬಿಸಿಯೂಟ ಸೇವಿಸಿ 150 ಮಕ್ಕಳು ಅಸ್ವಸ್ಥ: ಆಸ್ಪತ್ರೆ ಬಳಿ ಪೋಷಕರ ಆಕ್ರೋಶ

ಸರ್ಕಾರಿ ಉರ್ದು ಶಾಲೆಯ 150ಕ್ಕೂ ಹೆಚ್ಚು ಮಕ್ಕಳು ಶುಕ್ರವಾರ...

ಬೆಂಗಳೂರು: ಸರ್ಕಾರಿ ಉರ್ದು ಶಾಲೆಯ 150ಕ್ಕೂ ಹೆಚ್ಚು ಮಕ್ಕಳು ಶುಕ್ರವಾರ ಬಿಸಿಯೂಟ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಆಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲಾ ಮಕ್ಕಳು ಪ್ರಾಣಾಪಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಡಿಜೆ ಹಳ್ಳಿಯ ಮೋದಿ ರಸ್ತೆಯಲ್ಲಿರುವ ಉರ್ದು ಶಾಲೆಯ ಮಕ್ಕಳು ಇಂದು ಮಧ್ಯಾಹ್ನ ಬಿಸಿಯೂಟ ಸೇವಿಸಿದ ನಂತರ ತೀವ್ರ ಅಸ್ವಸ್ಥರಂತೆ ಕಂಡುಬಂದರು. ಕೂಡಲೇ ಅವರನ್ನು ಕಾವಲ್‌ಬೈರಸಂದ್ರದಲ್ಲಿರುವ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿದ್ದು, ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಆದರೆ, ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆ ಬಳಿ ಜಮಾಸಿದ ನೂರಾರು ಪೋಷಕರು, ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿಲ್ಲವೆಂದು ಆರೋಪಿಸಿ, ಆಸ್ಪತ್ರೆಯ ಕಿಟಕಿ ಗಾಜುಗಳನ್ನು ಹೊಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಆಸ್ಪತ್ರೆಯ ಬಳಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಮಾಧ್ಯಮಕ್ಕೆ ಮಾತನಾಡಿದ ಪೋಷಕರು, ಘಟನೆಗೆ ಶಾಲಾ ಮುಖ್ಯಸ್ಥರೇ ನೇರ ಹೊಣೆ ಎಂದು ದೂರಿದರು. ಆದರೆ ಈ ಶಾಲಾ ಮಕ್ಕಳಿಗೆ ಇಸ್ಕಾನ್ ಸಂಸ್ಥೆಯೂ ಬಿಸಿಯೂಟ ಪೂರೈಕೆ ಮಾಡುತ್ತಿದ್ದು, ಊಟದಲ್ಲಿ ಹಲ್ಲಿ ಬಿದ್ದಿರುವುದು ಘಟನೆಗೆ ಕಾರಣ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT