ಬೆಂಗಳೂರು: ಸೆಪ್ಟೆಂಬರ್ 29ರಂದು ಅಖಿಲ ಭಾರತ ಸರ್ವಜ್ಞ ವೇದಿಕೆ ಕವಿ ಸರ್ವಜ್ಞ-ಒಂದು ನೆನಪು ಎಂಬ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ವೇದಿಕೆ ವತಿಯಿಂದ ನೀಡಲಾಗುವ ಸರ್ವಜ್ಞ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ಅಂದು ಸಂಜೆ 4.30ಕ್ಕೆ ನಯನ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಸಾಹಿತಿ ಬಿ.ಬೋರೇಗೌಡ, ಸಿಬಿಐ ಎಸ್ ಪಿ (ಸೂಪರಿಂಟೆಂಡೆಂಟ್ ಆಫ್ ಪೊಲೀಸ್) ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್, ಸಹಕಾರ ಅಭಿವೃದ್ಧಿ ಅಧಿಕಾರಿ ಎಚ್.ಪಿ ಸದಾಶಿವ ಹಾಗೂ ಸಮಾಜ ಸೇವಕ ವೈ.ಜ.ನಾಗರಾಜ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ನಿವೃತ್ತ ಐಎಎಸ್ ಅಧಿಕಾರಿ ಟಿ.ತಿಮ್ಮೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಖ್ಯಾತ ಸಾಹಿತಿ ಡಾ.ಆರ್.ಕೆ. ನಲ್ಲೂರು ಪ್ರಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.