ಬೆಂಗಳೂರು ನಗರ

ಕೋಟಿ ವೃಕ್ಷ ಯೋಜನೆಯಡಿ 75,000 ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

Harshavardhan M

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಹಲವು ಎನ್ ಜಿ ಒ ಸಂಘಟನೆಗಳು, ನಾಗರಿಕ ಸಂಘಟನೆಗಳು ಕರ್ನಾಟಕ ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ ಮತ್ತು ಬಿಬಿಎಂಪಿ ಜಂತಿಯಾಗಿ 75,000 ಗಿಡಗಳನ್ನು ನೆಡುವ ಯೋಜನೆಗೆ ಚಾಲನೆ ನೀಡಲಾಗಿದೆ.

ಕೋಟಿ ವೃಕ್ಷ ಯೋಜನೆಯ ಅಡಿ 75,000 ಗಿಡಗಳನ್ನು ನೆಡಲಾಗುತ್ತಿದೆ. ನೆಡುವುದು ಮಾತ್ರವಲ್ಲೆ ಅವುಗಳಿಗೆ ಸರಿಯಾದ ಪೋಷಣೆ ದೊರೆಯುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 


ಈ ಪ್ರಯುಕ್ತ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪಾಲ್ಗೊಂಡರು. ಈ ವೇಳೆ ಮಾತನಾಡಿದ ಆಯುಕ್ತರು ಬೆಂಗಳೂರಿನ ಎಲ್ಲಾ ಪಾರ್ಕುಗಳಲ್ಲಿ ಮಳೆನೀರು ವ್ಯರ್ಥವಾಗುವುದನ್ನು ತಡೆಗಟ್ಟಲು, ಮಳೆನೀರು ಸಂಗ್ರಹಣೆಗೆ ಬಾವಿಗಳನ್ನು ನಿರ್ಮಿಸಲಾಗುವುದು ಎಂದು ತಿಳಿಸಿದರು.

ಪ್ರತಿ ಬಾವಿಯು 4,000 ಲೀ. ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. 
 

SCROLL FOR NEXT