ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಳಗಾವಿ

ಇಂದು ಪ್ರವೇಶ ಪರೀಕ್ಷೆ (ಸುದ್ದಿ ಸಂಕ್ಷೇಪ)

Parashurama
Updated On : 10 Feb 2013, 12:11 pm

ಚಿಕ್ಕೋಡಿ: ತಾಲೂಕಿನ ಕೋಥಳಿ ಗ್ರಾಮದ ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ ಫೆ. 10 ರಂದು ನಡೆಯಲಿದೆ ಎಂದು ಪ್ರಾಚಾರ್ಯ ರಾಮನಾಥ ತಿಳಿಸಿದ್ದಾರೆ. ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಧರಣಿ ನಡೆಸುತ್ತಿದ್ದಾರೆ. ಶಿಕ್ಷಕರು ಭಯಪಡುವ ಅಗತ್ಯವಿಲ್ಲ. ಧರಣಿ ಸತ್ಯಾಗ್ರಹಕ್ಕೂ ಪರೀಕ್ಷೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  
ಕೊಲೆ ಆರೋಪಿ ಬಂಧನ
ಂುಮನಕಮರಡಿ: ಹುಕ್ಕೇರಿ ತಾಲೂಕಿನ ಹಟ್ಟಿ ಆಲೂರು ಗ್ರಾಮದಲ್ಲಿ ಇತ್ತೀಚೆಗೆ ಬಾಳಪ್ಪಾ ರಾಮಪ್ಪಾ ಮಾಳಗಿ ಎಂಬಾತನನ್ನು ಕೊಲೆಗೈದ ಆರೋಪದ ಮೇರೆಗೆ ಲಗಮಪ್ಪಾ ರಾಮಪ್ಪಾ ಮಾಳಗಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕಣ್ಣು ತಪ್ಪಿಸಿ ಅಲೆದಾಡುತ್ತಿದ್ದ ಈತನನ್ನು ಬಂಧಿಸಿ ಆರೋಪಿಯನ್ನು ಹುಕ್ಕೇರಿಯ ಜೆಎಂಎಫ್‌ಸಿ ನ್ಯಾಂಾಲಯಕ್ಕೆ ಹಾಜರುಪಡಿಸಲಾಗಿದೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ
ಬೆಳಗಾವಿ: ಇಲ್ಲಿನ ಶೇರಿ ಗಲ್ಲಿಯ ಚಂದ್ರಪ್ರಭ ತೀರ್ಥಂಕರ ಮಂದಿರದಲ್ಲಿ ಫೆ.13 ರಿಂದ ಮೂರು ದಿನಗಳ ಕಾಲ ಪಂಚ ಕಲ್ಯಾಣ ಪ್ರತಿಷ್ಠಾ ಮಹೋತ್ಸವ ಹಾಗೂ ಬಸದಿಯ ಶತಮಾನೋತ್ಸವ ಸಮಾರಂಭ ನಡೆಯಲಿದೆ. 13 ರಂದು ಬೆಳಗ್ಗೆ ಧ್ವಜಾರೋಹಣ ಮತ್ತು ಮಂಟಪ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಸುರೇಶ ಅಂಗಡಿ, ಪ್ರಭಾಕರ ಕೋರೆ ಆಗಮಿಸುವರು. ಜ್ಞಾನೇಶ್ವರ ಮುನಿ, ಲಕ್ಷ್ಮಿಸೇನ ಭಟ್ಟಾರಕ, ಜಿನಸೇನ ಭಟ್ಟಾರಕ ಸ್ವಾಮೀಜಿ, ರುದ್ರಾಕ್ಷಿಮಠದ ಸಿದ್ಧರಾಮ ಸ್ವಾಮೀಜಿ ಮತ್ತು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯವಹಿಸುವರು.  14 ರಂದು ಬೆಳಗ್ಗೆ 8 ಗಂಟೆಗೆ ಜನ್ಮ ಕಲ್ಯಾಣ ಮಹೋತ್ಸವ, ಸಂಜೆ ದೀಕ್ಷಾ ಕಲ್ಯಾಣ ಮಹೋತ್ಸವ ಮತ್ತು ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. 15 ರಂದು ಸಂಜೆ 5 ಗಂಟೆಗೆ ರಥೋತ್ಸವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
13 ರಂದು ಪ್ರತಿಭಟನೆ
ಬೆಳಗಾವಿ: ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಮಹಾವಿದ್ಯಾಲಯದ ಶಿಕ್ಷಕರ ವೇತನ, ಮನೆ ಭತ್ಯೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಎಸಗಿದೆ ಎಂದು ಆರೋಪಿಸಿ ಶಿಕ್ಷಕರು, ಸಹ ಶಿಕ್ಷಕರು ಫೆ. 13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಶನಿವಾರ ನಡೆದ ಶಿಕ್ಷಕರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಥಮಿಕ ಶಾಲೆ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಯ್ಯ ಧಾರವಾಡಮಠ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments