ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಳಗಾವಿ

ನಾಳೆಯಿಂದ ಶರಣ ಸಂಸ್ಕೃತಿ ಉತ್ಸವ

Parashurama
Updated On : 12 Feb 2013, 12:07 pm

ಗೋಕಾಕ: ಶೂನ್ಯ ಸಂಪಾದನಮಠದ ಆಶ್ರಯದಲ್ಲಿ ಬರುವ ಫೆ.13 ರಿಂದ 17ರ ವರೆಗೆ ಶರಣ ಸಂಸ್ಕೃತಿ ಉತ್ಸವ-2013 ನಗರದ ವಾಲ್ಮೀಕಿ ವೃತ್ತದಲ್ಲಿರುವ ಚನ್ನಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದ ಗುರುವಾರ ಪೇಟೆಯಲ್ಲಿರುವ ಶೂನ್ಯ ಸಂಪಾದನ ಮಠದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಗರದ ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಸ್ವಾಮೀಜಿ, ವಿಶ್ವಗುರು ಬಸವಣ್ಣನವರ ಜಯಂತಿ ಶತಮಾನೋತ್ಸವ ವರ್ಷಾಚರಣೆ, ಲಿಂಗೈಕ್ಯ ಬಸವ ಮಹಾಸ್ವಾಮಿಗಳ 8ನೇ ಪುಣ್ಯಸ್ಮರಣೋತ್ಸವ, ಕಾಯಕಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಹೇಳಿದರು.
13 ರಂದು ಸಂಜೆ 6ಗಂಟೆಗೆ ಕಾಯಕಶ್ರೀ ಪ್ರಶಸ್ತಿ ಪ್ರದಾನ ಹಾಗೂ ಶರಣತತ್ವ ಚಿಂತನಗೋಷ್ಠಿ ಸಮಾರಂಭವನ್ನು ಸಂಸದ ಸುರೇಶ ಅಂಗಡಿ ಉದ್ಘಾಟಿಸಲಿದ್ದು, ಘಟಪ್ರಭಾದ ಗುದ್ದಲಗುಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ಹಾಗೂ ಸುರೇಶ ಸೊಲ್ಲಾಪೂರಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ರಮೇಶ ಜಾರಕಿಹೊಳಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಮೇ. ಸಿದ್ಧಲಿಂಗಯ್ಯ ಹಿರೇಮಠ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಎಮ್.ಡಿ. ಚುನಮರಿ ಆಗಮಿಸಲಿದ್ದಾರೆ.
14 ರಂದು ಸಂಜೆ 6ಕ್ಕೆ ಮಧುರ ಸಂಗೀತ ಗೆಳೆಯರ ಬಳಗ ಅರ್ಪಿಸುವ ಜಾಗೃತ ಭಾರತ ಕಾರ್ಯಕ್ರಮ ಉಪ ಅರಣ್ಯ ಸಂರಕ್ಷಣಾಧಿಕಾರಿ ಟಿ.ಹೀರಾಲಾಲ ಉದ್ಘಾಟಿಸುವರು. ಅಥಣಿಯ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹಾಗೂ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ರಮೇಶ ಕತ್ತಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಿವೇಕರಾವ್ ಪಾಟೀಲ, ಅಶೋಕ ಪೂಜಾರಿ ಆಗಮಿಸಲಿದ್ದಾರೆ.
15 ರಂದು ಸಂಜೆ 6ಕ್ಕೆ ನಡೆಯಲಿರುವ ಮಹಿಳಾಗೋಷ್ಠಿಯನ್ನು ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದು, ಹಂದಿಗುಂದ ಆಡಿ ಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ ಹಾಗೂ ಬಟಕುರ್ಕಿ ವಿರಕ್ತಮಠದ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.  ವೀರಶೈವ ಜಾಗ್ರತಾ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀದೇವಿ ತಡಕೋಡ ಅಧ್ಯಕ್ಷತೆ ವಹಿಸುವರು. ನಂತರ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವವು.  
16 ರಂದು ಸಂಜೆ 6ಕ್ಕೆ ವಿಶ್ವಗುರು ಬಸವಣ್ಣವರ ಜಯಂತಿ ಶತಮಾನೋತ್ಸವ ವರ್ಷಾಚರಣೆ ನಿಮಿತ್ತ ಜಗಜ್ಯೋತಿ ಬಸವೇಶ್ವರ ನಾಟಕ ಪ್ರದರ್ಶನ ಜರುಗಲಿದೆ. ವಿಧಾನಪರಿಷತ್ ಸದಸ್ಯ ಮಹಾಂತೇಶ ಕೌಜಲಗಿ ಉದ್ಘಾಟಿಸುವರು. ಹಾಲ್ವಿ ಆಂಧ್ರಪ್ರದೇಶದ ಚರಣಗಿರಿ ಸಂಸ್ಥಾನಮಠದ ಮಹಾಂತ ಸ್ವಾಮೀಜಿ ಹಾಗೂ ಶಿಗ್ಗಾಂವದ ವಿರಕ್ತಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.
17 ರಂದು ಬೆಳಗ್ಗೆ 6ಕ್ಕೆ ಕರ್ತೃಗದ್ದುಗೆಗೆ ಹಾಗೂ ಲಿಂಗೈಕ್ಯ ಬಸವಮಹಾಸ್ವಾಮಿಗಳ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ ಕಾರ್ಯಕ್ರಮ ನಡೆಯಲಿದೆ. 8-30ಕ್ಕೆ ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬಲಾಗುವುದು.
9-30ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಶರಣ ಸಂಸ್ಕೃತಿ ಉತ್ಸವ ಸಮಿತಿ ಗೋಕಾಕ ಇವರ ಸಹಯೋಗದಲ್ಲಿ ಮುಪ್ಪಯ್ಯನಮಠದ ರಾಚೋಟಿ ದೇವರ ಹಸ್ತದಿಂದ ಉದ್ಘಾಟನೆಗೊಂಡು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶ್ರೀಮಠಕ್ಕೆ ತಲುಪುವುದು. ಮಧ್ಯಾಹ್ನ 12-30ಕ್ಕೆ ಶ್ರೀಮಠದಲ್ಲಿ ಉಚಿತ ಸಾಮೂಹಿಕ ವಿವಾಹ ಜರುಗಲಿವೆ.
ಸಂಜೆ 6ಕ್ಕೆ ಮಕ್ಕಳಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಅಥಣಿಯ ಗಚ್ಚಿನಮಠದ ಚನ್ನಬಸವ ಸ್ವಾಮೀಜಿ ಹಾಗೂ ಹೂಲಿಕಟ್ಟಿಯ ಶಿವಲಿಂಗೇಶ್ವರ ಮಠದ ಕುಮಾರದೇವರು ಸಾನ್ನಿಧ್ಯ ವಹಿಸುವರು. ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರಪ.ಬಿ.ಆರ್.ಅನಂತನ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಶ್ರೀಗಳು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಶರಣ ಸಂಸ್ಕೃತಿ ಉತ್ಸವ ಸಮಿತಿ ಅಧ್ಯಕ್ಷ ಆನಂದ ಗೋಟಡಕಿ, ಬಸನಗೌಡ ಪಾಟೀಲ, ಸದಾನಂದ ಹಿರೇಮಠ, ಈರಣ್ಣಾ ವಂಟಮೂರಿಮಠ, ಮೈಲಾರಲಿಂಗ ಉಪ್ಪಿನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments