'ಪಠ್ಯೇತರ ಚಟುವಟಿಕೆಯಲ್ಲಿ ಆಸಕ್ತಿ ವಹಿಸಿ'
ಬೆಳಗಾವಿ: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸುವುದರಿಂದ ಅವರ ಉತ್ತಮ ವ್ಯಕ್ತಿತ್ವ ಅನಾವರಣಗೊಳ್ಳುತ್ತದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತ ಪಿ.ಎನ್. ಲೋಕೇಶ ಹೇಳಿದ್ದಾರೆ.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಿಕ್ಷಣ ಮಹಾವಿದ್ಯಾಲದಲ್ಲಿ ಇತ್ತೀಚೆಗೆ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಒಕ್ಕೂಟ ಹಾಗೂ ವಿಷಯ ಸಂಘಗಳ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಂಪೂರ್ಣವಾಗಿ ಶೈಕ್ಷಣಿಕ ರಂಗದ ಎಲ್ಲ ಚಟುವಟಿಕೆಯಲ್ಲಿ ನಿರಂತವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಹೊಸ ಬದಲಾವಣೆ ಮತ್ತು ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ಸತತ ಓದುವುದರಿಂದ ತಮ್ಮ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕನಕದಾಸ ಶಿಕ್ಷಣ ಸಮಿತಿ ಕಾರ್ಯದರ್ಶಿ ರವಿ ದಂಡಿನ ಮಾತನಾಡಿ, ಶಿಕ್ಷಕರ ವೃತ್ತಿ ಗೌರವಾನ್ವಿತವಾಗಿದ್ದು, ವೃತ್ತಿಯಲ್ಲಿ ಸಾಧನೆ ಮಾಡಲು ವಿದ್ಯಾರ್ಥಿಗಳು ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗಬೇಕೆಂದು ಹೇಳಿದರು. ವಿದ್ಯಾರ್ಥಿ ಒಕ್ಕೂಟದ ಕಾರ್ಯಾಧ್ಯಕ್ಷ ಎಸ್.ಎಸ್. ಬಡಿಗೇರ ವಾರ್ಷಿಕ ವರದಿ ಓದಿದರು. ಸಂಸ್ಥೆಯ ವ್ಯವಸ್ಥಾಪಕ ಕೆ.ಬಿ. ಕುರಿ ಇದ್ದರು. ಪ್ರಾಚಾರ್ಯ ಡಾ. ಎ.ಎಲ್. ಪಾಟೀಲ ಸ್ವಾಗತಿಸಿದರು. ವಿವೇಕಾನಂದ ಸಂಕೊನಟ್ಟಿ ವಂದಿಸಿದರು. ಅಶೋಕ ಕಮ್ಮಾರ ನಿರೂಪಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.