ಬೆಳಗಾವಿ

ನ್ಯಾಯಾಲಯ ಮಂಜೂರಾತಿ ಆದೇಶ ಪ್ರತಿ ಹಸ್ತಾಂತರ

ಚಿಕ್ಕೋಡಿ:  ಇಲ್ಲಿನ ಹಳೆ ತಹಸೀಲ್ದಾರ ಕಚೇರಿಯಲ್ಲಿ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಪ್ರಾರಂಭಿಸುವ ಉದ್ದೇಶದಿಂದ ಸರ್ಕಾರ ರು. 1 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಪ್ರಕಾಶ ಹುಕ್ಕೇರಿ ಹೇಳಿದರು.
ಇಲ್ಲಿನ ನ್ಯಾಯಾಲಯದ ಸಭಾಭವನದಲ್ಲಿ ಸೋಮವಾರ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಮಂಜೂರಾತಿ ಆದೇಶ ಪತ್ರವನ್ನು ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ಕಾಮಗಾರಿ ಪ್ರಾರಂಭಿಸಿಲು ರು. 60 ಲಕ್ಷ ಅನುದಾನ ಬಿಡುಗಡೆ ಯಾಗಿದೆ. ಜೊತೆಗೆ 2013-14ರಲ್ಲಿ ಮಳಿಗೆಗಳ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ ಎಂದು ತಿಳಿಸಿದ ಅವರು, ಕಾಮಗಾರಿ ಆರಂಭಿಸಿದ ನಂತರ ರು. 40 ಲಕ್ಷ ಅನುದಾನ ಬಿಡುಗಡೆಯಾಗುವುದು ಎಂದು ತಿಳಿಸಿದರು. ನ್ಯಾಯಾಧೀಶ ಸಿ.ವ್ಹಿ. ಮರಗೂರ, ಡಿ.ವೈ.ಬಸ್ಸಾಪೂರ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ಜೆ.ಎನ್. ತೆಂಗಿನಕಾಯಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಜಿ. ಹಿರೇಮಠ, ಕಾರ್ಯದರ್ಶಿ ಆರ್.ಬಿ. ಸಂಗ್ರೋಳಿ, ಉಪಾಧ್ಯಕ್ಷ ಎಂ.ಕೆ. ಪೂಜೇರಿ, ಸಿ.ಬಿ. ಭೀಮಣ್ಣವರ, ಸತೀಶ ಕುಲಕರ್ಣಿ, ಅಶೋಕ ಹರಗಾಪೂರೆ, ಮುದ್ದುಸರ ಜಮಾದಾರ, ಶ್ರೀನಿವಾಸ ಘಸ್ತಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!