ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಳಗಾವಿ

ಇಂದು ಕೃಷಿ ಪಂಡಿತ ಪ್ರಶಸ್ತಿ ಪ್ರದಾನ

Parashurama
Updated On : 27 Jan 2013, 11:59 am

ಬೆಳಗಾವಿ: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಪ್ರದಾನ ಸಮಾರಂಭ ಸೋಮವಾರ ಇಲ್ಲಿನ ಸುವರ್ಣ ವಿಧಾನಸೌಧದ ಸೆಂಟ್ರಲ್ ಹಾಲ್‌ನಲ್ಲಿ ನಡೆಯಲಿದೆ. ಮಧಾಹ್ನ12 ಗಂಟೆಗೆ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡುವರು. ಶಾಸಕ ಸಂಜಯ್ ಪಾಟೀಲ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವರೂ ಆದ ಕೃಷಿ ಸಚಿವ ಉಮೇಶ ಕತ್ತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ತೋಟಗಾರಿಕೆ ಮತ್ತು ಸಕ್ಕರೆ ಖಾತೆ ಸಚಿವ ಎಸ್.ಎ. ರವೀಂದ್ರನಾಥ, ಕಾರ್ಮಿಕ ಮತ್ತು ರೇಷ್ಮೆ ಸಚಿವ ಬಿ.ಎನ್.ಬಚ್ಚೇಗೌಡ ಸೇರಿಂದಂತೆ ಅನೇಕ ಸಚಿವರು ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments