ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಳಗಾವಿ

ವಾಹನ ಡಿಕ್ಕಿ:ಇಂದು ರೈತರಿಗೆ ಕೃಷಿ ಕುರಿತು ಕಾರ್ಯಾಗಾರ

Parashurama
Updated On : 8 Mar 2013, 11:54 am

ಬೆಳಗಾವಿ: ಕರ್ನಾಟಕ ಸುಸ್ಥಿರ ಅರಣ್ಯ ನಿರ್ವಹಣೆ ಮತ್ತು ಜೈವಿಕ ವೈವಿಧ್ಯತೆ ಸಂರಕ್ಷಣೆ ಯೋಜನೆ ಅಡಿಯಲ್ಲಿ ರೈತರಿಗೆ ಕೃಷಿ, ಅರಣ್ಯದ ಬಗ್ಗೆ ಕುರಿತ ಕಾರ್ಯಾಗಾರ ಮಾ.8 ರಂದು ಬೆಳಗ್ಗೆ 10.30ಕ್ಕೆ ಅರಣ್ಯ ಇಲಾಖೆಯ ಆವರಣದ ನೂತನ ಸಭಾಭವನದಲ್ಲಿ ನಡೆಯಲಿದೆ. ಜಿಪಂ ಸಿಇಒ ವಿ. ಶಂಕರ ಉದ್ಘಾಟಿಸುವರು. ಬೆಳಗಾವಿ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ ಹೊಸೂರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಅರಣ್ಯ ಸಂರಕ್ಷಣಾಧಿಕಾರಿ ಅನಿಲಕುಮಾರ ರತನ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಬಾಡಿ ಮಾಧವ ಆಗಮಿಸುವರು. ನಂತರ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಇಂದು  ನೀರು ಪೂರೈಕೆಯಲ್ಲಿ ವ್ಯತ್ಯಯ
ಬೆಳಗಾವಿ: ನಗರದಲ್ಲಿ ರಸ್ತೆ ಅಗಲಿಕರಣ ಮಾಡುವಾಗ ಉತ್ತರ ವಲಯಕ್ಕೆ ನೀರು ಸರಬರಾಜು ಮಾಡುವ ಕೊಳವೆ ಮಾರ್ಗವು ಗುರುವಾರ ಒಡೆದಿದ್ದರಿಂದ ಮಾ.8 ರಂದು ನಗರದ 24x7 ನೀರು ಸರಬರಾಜು ಪ್ರದೇಶ ಸೇರಿದಂತೆ ಎಲ್ಲ ಪ್ರದೇಶದಲ್ಲಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಓರ್ವನ ಸಾವು
ಚಿಕ್ಕೋಡಿ: ಟ್ರಾಕ್ಟರ್ ಮತ್ತು ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ಯುವಕನೊಬ್ಬ ಮೃತಪಟ್ಟು, ಯುವತಿಯೋರ್ವಳು ಗಂಭೀರ ಗಾಯಗೊಂಡ ಘಟನೆ ಸ್ಥಳೀಯ ದೂಧಗಂಗಾ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಹತ್ತಿರ ಗುರುವಾರ ಬೆಳಗ್ಗೆ ಸಂಭವಿಸಿದೆ. ಮೃತಪಟ್ಟ ಯುವಕನನ್ನು ಯಕ್ಸಂಬಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳ್ಳಾಗಡ್ಡಿವಾಡಿ ಗ್ರಾಮದ ಮಹಾಂತೇಶ ನಿಂಗಪ್ಪಾ ಖೋತ(16) ಎಂದು ಗುರುತಿಸಲಾಗಿದೆ. ಸಹೋದರಿ ಅಶ್ವಿನಿ ನಿಂಗಪ್ಪಾ ಖೋತ(23) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಪ್ರಕಾಶ ಹುಕ್ಕೇರಿ ಮಗನನ್ನು ಕಳೆದುಕೊಂಡ ಕುಟುಂಬದವರಿಗೆ ಸಾಂತ್ವನ ಹೇಳಿ, ಗಂಭೀರವಾಗಿ ಗಾಯಗೊಂಡಿರುವ ಯುವತಿಯ ಚಿಕಿತ್ಸೆಗಾಗಿ ಕುಟುಂಬದವರಿಗೆ ರು. 50 ಸಾವಿರ ಪರಿಹಾರ ನೀಡಿದರು. ನಂತರ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಆಸ್ಪತ್ರೆಗೆ ಭೇಟಿ ನೀಡಿ ಮೃತ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments