'ಶೋಷಣೆ ವಿರುದ್ಧ ಸಂಘಟಿತರಾಗಿ'
ಚಿಕ್ಕೋಡಿ: ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಿದಾಗ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಸಾಧ್ಯ ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಮೀಳಾ ಜೋಗುಳೆ ಹೇಳಿದರು.
ಇಲ್ಲಿನ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ನಲ್ಲಿ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಮಹಿಳಾ ವಿಕಾಸ ಗ್ರಾಮ ಸಭಾ ಕಾರ್ಯಕ್ರಮದಲ್ಲಿ ಸಾಲ ಮಂಜೂರಾತಿ ಪತ್ರ ವಿತರಿಸಿ ಅವರು ಮಾತನಾಡಿದರು.
ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯಲು ಮುಖ್ಯವಾಗಿ ಅವಳು ಧರಿಸುವ ಬಟ್ಟೆ ಕಾರಣ. ಮಹಿಳೆಯರ ಮೇಲೆ ಶೋಷಣೆ, ಅನ್ಯಾಯಗಳು ನಡೆಯುತ್ತಿದ್ದರೆ ಎಲ್ಲ ಮಹಿಳೆಯರು ಒಗ್ಗಟ್ಟಿನಿಂದ ಪ್ರತಿಭಟಿಸಬೇಕು ಎಂದರು.
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಪ್ರಾದೇಶಿಕ ಕಚೇರಿ ಮ್ಯಾನೇಜರ ಬಿ.ಪಿ. ಪೂಜಾರ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಮಹಿಳಾ ಸ್ವಹಾಯ ಸಂಘದ ಸದಸ್ಯರಿಗೆ, ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಶಿಕ್ಷಣ ಸೇರಿದಂತೆ ವಿವಿಧ ಸಾಲ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಶಾಖಾ ವ್ಯವಸ್ಥಾಪಕ ಆರ್.ಬಿ. ಚಬ್ಬಿ, ಆರ್.ಕೆ. ರಾಮದಾಸಿ, ಯು.ಎಸ್. ಮುಂಗಾರಿ, ಬಿ.ಬಿ. ಅಕ್ಕೋಳೆ, ಪಿ.ಟಿ. ಶಾನಬಾಗ, ಅನೀಲ ಪಾಟೀಲ, ಈರಗೌಡಾ ಪಾಟೀಲ, ಆರ್.ಎಂ. ಕರನಿಂಗ, ಎಸ್.ಬಿ. ಕುಂಬಾರ ಉಪಸ್ಥಿತರಿದ್ದರು. ಎಸ್.ಎಂ. ಪಟೇಲ್ ಪ್ರಾಸ್ತಾವಿಕ ಮಾತನಾಡಿದರು. ಪಿ.ಆರ್. ಶಿಂತ್ರೆ ಸ್ವಾಗತಿಸಿದರು. ಸಹಾಯಕ ಶಾಖಾಧಿಕಾರಿ ಕೆ.ಎಸ್.ವಿಶ್ವನಾಥ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.