ಗೂಂಡಾಗಿರಿ ಮಾಡುತ್ತಿರುವ ವ್ಯಕ್ತಿ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಳಗಾವಿ: ನಗರದ ವಾರ್ಡ್ ನಂ.35ರ ನಿವಾಸಿಗಳ ಮೇಲೆ ಗೂಂಡಾಗಿರಿ ನಡೆಸುತ್ತಿರುವ ಆಶೀಫ್ ಶೇಖ್ ಮತ್ತು ಆತನ ಕುಟುಂಬ ಸದಸ್ಯರ ವಿರುದ್ಧ ಕಾನೂನಿನಡಿ ಕಠಿಣ ಕ್ರಮ ಜರುಗಿಸಲು ಆಗ್ರಹಿಸಿ ಶನಿವಾರ ವಾರ್ಡ್ ನಂ.35ರ ನಿವಾಸಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಆಶೀಫ್ ಶೇಖ್ ಮತ್ತು ಆತನ ಕುಟುಂಬ ಸದಸ್ಯರು ಕಳೆದ ಹಲವು ತಿಂಗಳಿನಿಂದ ವಾರ್ಡ್ ನಂ.35ರ ನಿವಾಸಿಗಳ ಮೇಲೆ ಗೂಂಡಾಗಿರಿ ನಡೆಸುತ್ತಿದ್ದಾರೆ. ಇತ್ತೀಚೆಗೆ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತ ಮೇಲೆ ಆಶೀಫ್ ಶೇಖ್ನ ಗೂಂಡಾಗಿರಿ ಹೆಚ್ಚಾಗಿದೆ. ಈತನ ದಿನ ನಿತ್ಯ ಉಪಟಳಕ್ಕೆ ಭಯಭೀತರಾಗಿ ಅನೇಕ ಕುಟುಂಬಗಳು ಮನೆ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಿದರು. ಇತ್ತೀಚೆಗೆ ಆಶೀಫ್ ಶೇಖ್ ಮತ್ತು ಆತನ ಹಿಂಬಾಲಕರು ವಾರ್ಡ್ ನಂ. 35ರ ನಿವಾಸಿಯಾದ ಗೌಂಡಿ ಕುಟುಂಬದವರ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಆಶೀಫ್ ಶೇಖ್ ವಿರುದ್ಧ ಈ ಹಿಂದೆಯೂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಪೊಲೀಸ್ ಇಲಾಖೆ ಕೂಡಲೆ ಶೇಖ್ ಕುಟುಂಬದ ಸದಸ್ಯರ ಗೂಂಡಾಗಿರಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.