ಬೆಳಗಾವಿ

ಮಣಿಪಾಲ್ ಆಸ್ಪತ್ರೆಗೆ ಸಿ.ಸಿ. ಪಾಟೀಲ್

ಕ.ಪ್ರ. ವಾರ್ತೆ ಬೆಳಗಾವಿ ಮಾ.29
ತಮ್ಮ ಅಂಗರಕ್ಷಕನ ರಿವಾಲ್ವರ್‌ನಿಂದ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ ತೀವ್ರವಾಗಿ ಗಾಯಗೊಂಡಿದ್ದ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ್ ಅವರನ್ನು ಶುಕ್ರವಾರ ಏರ್ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ನರಗುಂದ ಮತಕ್ಷೇತ್ರ ವ್ಯಾಪ್ತಿಯ ರೋಣ ತಾಲೂಕಿನ ಮೆಣಸಗಿಯಲ್ಲಿ ಕಳೆದ ಮಾ.17 ರಂದು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡಿದ್ದಾಗ ನಡೆದ ಸಣ್ಣ ಗಲಾಟೆಯಲ್ಲಿ ಅಂಗರಕ್ಷಕನ ರಿವಾಲ್ವರ್‌ನಿಂದ ಸಿಡಿದ ಗುಂಡು ಪಾಟೀಲರನ್ನು ತೀವ್ರ ಘಾಸಿ ಗೊಳಿಸಿತ್ತು. ಅಂದು ರಾತ್ರಿಯೇ ಅವರನ್ನು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಮಾ.18ರಂದು ಅವರಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅವರು ಚೇತರಿಸಿಕೊಂಡು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅವರ ಬಯಕೆಯಂತೆ ಪಾಟೀಲರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಅಲ್ಲಿ ಮತ್ತೊಮ್ಮೆ ಅವರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅಗತ್ಯ ಚಿಕಿತ್ಸೆ ನೀಡಲಾಗುತ್ತದೆ. ಸಿ.ಸಿ. ಪಾಟೀಲ್ ಎಲ್ಲರೊಂದಿಗೆ ಮಾತನಾಡುತ್ತಿದ್ದಾರೆ ಎಂದು ಕೆಎಲ್‌ಇ ಆಸ್ಪತ್ರೆಂು ಡಾ.ಎಂ.ಎಸ್.ಗೋಧಿ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ. ಬೆಂಗಳೂರಿನಿಂದ ಆಗಮಿಸಿದ್ದ ವಿಶೇಷ ಏರ್ ಆ್ಯಂಬುಲೆನ್ಸ್‌ದಲ್ಲಿ  ಸಾಂಬ್ರಾ ವಿಮಾನ ನಿಲ್ದಾಣದ ಮೂಲಕ ಅವರನ್ನು ಬೆಂಗಳೂರಿಗೆ ಕಳುಹಿಸಲಾಯಿತು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ. ವಿಜಯೇಂದ್ರ

'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!

ಟೀಂ ಇಂಡಿಯಾ ಸೆಲೆಕ್ಷನ್ ಕಮಿಟಿ ಅಧ್ಯಕ್ಷರ ಆಯ್ಕೆ: ಮೇಜರ್ ಟ್ವಿಸ್ಟ್, ರೇಸ್ ನಿಂದ ಪಾರ್ಥಿವ್‌ ಪಟೇಲ್ ಔಟ್? 24 ಟೆಸ್ಟ್‌ ಅನುಭವದ ಮಾಜಿ ಕ್ರಿಕೆಟಿಗನ ಹೆಸರು ಮುಂಚೂಣಿಗೆ!

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ