ಬೆಳಗಾವಿ: ಹೆಸ್ಕಾಂ ಮತ್ತು ಕೆಪಿಟಿಸಿಎಲ್ನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಡಗಡ ಕಲ್ಯಾಣ ಸಂಸ್ಥೆಯಿಂದ ಡಾ. ಬಿ.ಆರ್. ಅಂಬೇಡ್ಕರ ಅವರ 123ನೇ ಜಯಂತಿಯನ್ನು ಸೋಮವಾರ ಅದ್ಧೂರಿಯಾಗಿ ಆಚರಿಸಲಾಯಿತು.
ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ ಡಾ. ಅಂಬೇಡ್ಕರ ಅವರ ಭಾವನ ಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಟಿಸಿಎಲ್ ಮುಖ್ಯ ಎಂಜಿನಿಯರ್ ಸಿದ್ದರಾಜು, ಟಿ.ಬಿ. ಮಜ್ಜಗಿ ಹಾಗೂ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ನಾತಾಜಿ ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ ಕೋಲಕಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.