ಬೆಳಗಾವಿ: ಯಳ್ಳೂರಿನ ಮಹಾರಾಷ್ಟ್ರ ರಾಜ್ಯ ಫಲಕ ತೆರವು ಪ್ರಕರಣಕ್ಕೆ ಸಂಬಂಧಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಕಿಡಿಗೇಡಿಗಳ ವಿರುದ್ಧ ಪೊಲೀಸರು 7 ಪ್ರಕರಣ ದಾಖಲಿಸಿಕೊಂಡಿದ್ದು, 6 ಜನರನ್ನು ಬಂಧಿಸಿದ್ದಾರೆ. ಇನ್ನಷ್ಟು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ, ಅಬಕಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಳ್ಳೂರು ಗಲಭೆ ಬಗ್ಗೆ ಸಮಗ್ರವಾಗಿ ವಿಡಿಯೋ ಚಿತ್ರೀಕರಣ, ಛಾಯಾಚಿತ್ರಗಳನ್ನು ಕಲೆ ಹಾಕಲಾಗಿದ್ದು, ಅವುಗಳನ್ನು ಪರಿಶೀಲನೆ ನಡೆಸಿದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.