ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ ಹಾಗೂ ಬಿಜೆಪಿ ಕಾರ್ಯಕರ್ತರು ಅಣಿಗೊಳಿಸಲು ಜಿಲ್ಲೆಯಲ್ಲಿ 4 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಗೆಲ್ಲಿಸಿ ಸಮಾವೇಶ್ನ ಹಮ್ಮಿಕೊಳ್ಳಲಾಗಿದೆ.
ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಫೆ.21ರಂದು ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೈಲಹೊಂಗಲ ನಗರದಲ್ಲಿ ರಾಣಿ ಚನ್ನಮ್ಮ ಸಮಾಧಿ ಹತ್ತಿರ 10 ಗಂಟೆಗೆ, ಸವದತ್ತಿ ನಗರದ ತಾಲೂಕಾ ಕ್ರಿಡಾಂಗಣದಲ್ಲಿ ಮಧ್ಯಾಹ್ನ್ನ 12ಕ್ಕೆ, ಗೋಕಾಕ ನಗರದ ಕೋಳಿ ಸರ್ಕಲ್ ಹತ್ತಿರದ ಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಮಧ್ಯಾಹ್ನ್ನ 2ಕ್ಕೆ, ಅರಬಾವಿ ಮತ ಕ್ಷೇತ್ರದ ಕಲ್ಲೋಳಿ ಎಸ್.ಆರ್.ಇ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಮಧ್ಯಾಹ್ನ 3ಕ್ಕೆ ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.ಶಾಸಕರಾದ ಉಮೇಶ ಕತ್ತಿ, ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಆನಂದ ಮಾಮನಿ, ಡಾ. ವಿಶ್ವನಾಥ ಪಾಟೀಲ, ಸಂಜಯ ಪಾಟೀಲ, ಸಂಸದರಾದ ಡಾ. ಪ್ರಭಾಕರ ಕೊರೆ, ಸುರೇಶ ಅಂಗಡಿ, ರಮೇಶ ಕತ್ತಿ, ಮತ್ತು ಬಿಜೆಪಿ ಮುಖಂಡ ಮಹಾಂತೇಶ ಕವಟಗಿಮಠ, ಪಕ್ಷದ ಪ್ರಮುಖ ಶ್ರೀಕಾಂತ ಕುಲಕರ್ಣಿ, ಜಗದೀಶ ಮೆಟಗುಡ್ಡ, ಮಹಾದೇವಪ್ಪ ಯಾದವಾಡ, ಅಭಯ ಪಾಟೀಲ, ಶಂಕರಗೌಡ ಪಾಟೀಲ ಮುಂತಾದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಈರಣ್ಣ ಕಡಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.