ಬೆಳಗಾವಿ: ತಾಲೂಕಿನ ಹಿಂಡಲಗಾ ಗ್ರಾಮದ ಮಹಾದೇವ ಗಲ್ಲಿಯ ಪ್ರಾರ್ಥನಾ ಮಂದಿರಕ್ಕೆ ಕಲ್ಲು ತೂರಿ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 16 ಜನರನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಶಿವಾಜಿ ಮಹಾರಾಜ ಮತ್ತು ಬಾಳ ಠಾಕ್ರೆ ಅವರ ಬಗ್ಗೆ ಅಂತರ್ಜಾಲದಲ್ಲಿ ಅವಮಾನಿಸಿದ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಹಿಂಸಾಚಾರದ ವೇಳೆಯೇ ಬಂಧಿತರು ಪ್ರಾರ್ಥನಾ ಮಂದಿರದ ಮೇಲೆ ಕಲ್ಲು ತೂರಾಟ ನಡೆಸಿ, ಪ್ರಾರ್ಥನಾ ಮಂದಿರ ಬಳಿಯಿದ್ದ ವಾಹನಗಳ ಗಾಜು ಪುಡಿಪುಡಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸೋಮವಾರ 10 ಜನರನ್ನು ಬಂಧಿಸಿದ್ದರು. ಮಂಗಳವಾರ ಮತ್ತೆ 6 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಅಟ್ಟಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.