ಂುಮಕನಮರಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವಿನ ಆಸ್ತಿ ವಿವಾದ ವಿಕೋಪಕ್ಕೆ ತಿರುಗಿ ಮೂವರ ಕೊಲೆಯಲ್ಲಿ ಅಂತ್ಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಸಂ್ಯುದ್ ಪೀರಸಾಬ್ ಮುಲ್ತಾನಿ(24), ಅಕ್ಬರ್ (22), ಬಾನು (56) ಮೃತರು. ಗಂಭೀರ ಗಾಯಗೊಂಡಿದ್ದ ಇವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. 16 ಗುಂಟೆ ಜಮೀನಿನಲ್ಲಿ ಗಳೆ ಹೊಡೆದ ವಿಷಂುವಾಗಿ ಕುಟುಂಬಗಳ ನಡುವೆ ವಿವಾದ ಶುರುವಾಗಿದೆ. ನಂತರ ಜಗಳಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಹೊಡೆದಾಡಿದ್ದಾರೆ. ಗ್ರಾಮದಲ್ಲೀಗ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.