ಬೆಳಗಾವಿ

ಜವಳಿ ಪಾರ್ಕ್ ಸ್ಥಾಪನೆಗೆ ಯತ್ನ

ಬೆಳಗಾವಿ: ನೇಕಾರರ ಹಿತ ಕಾಪಾಡುವುದಕ್ಕಾಗಿ ಬೆಳಗಾವಿಯಲ್ಲಿ ಟೆಕ್ಸಟೈಲ್ ಪಾರ್ಕ್ ನಿರ್ಮಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳಕರ ಹೇಳಿದ್ದಾರೆ.
ಗುರುವಾರ ನಗರದ ವಡಗಾಂವಿ, ಶಹಾಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿ ಅವರು ಮಾತನಾಡಿದರು.
ಹಲವಾರು ದಶಕಗಳಿಂದ ನೇಕಾರರು ಹತ್ತು ಹಲವಾರು ಸಮಸ್ಯೆ ಎದುರಿಸುತ್ತಿದ್ದು, ನೇಕಾರರ ಒಳಿತಿಗೆ ಕೇಂದ್ರ ಸರ್ಕಾರದಿಂದ ಅನೇಕ ಯೋಜನೆಗಳನ್ನ್ನು ಮಂಜೂರು ಮಾಡಿಸುವೆ. ಜಿಲ್ಲೆಯಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನೇಕಾರರು ಸಿದ್ಧಪಡಿಸುವ ಸೀರೆ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ರಾಷ್ಟ್ರಮಟ್ಟದ ಮಾರುಕಟ್ಟೆ ಒದಗಿಸಿ ನೇಕಾರ ಬದುಕಿಗೆ ಅನುಕೂಲವಾಗುವಂತಹ ಕೆಲಸ ಮಾಡುವುದಾಗಿ ಹೆಬ್ಬಾಳಕರ ಹೇಳಿದ್ದಾರೆ.
ಬರುವ ಏ.17 ರಂದು ಮತದಾರರು ತಪ್ಪದೇ ಮತಚಲಾಯಿಸಬೇಕು. ಅಂದು ದೈನಂದಿನ ಚಟುವಟಿಕೆಗಳಿಗೆ ವಿರಾಮ ನೀಡಿ ತಮ್ಮ ಹಕ್ಕು ಚಲಾಯಿಸುವದರ ಮೂಲಕ ಕಾಂಗ್ರೆಸ್ ಪಕ್ಷವನ್ನ್ನು ಬಹುಮತದಿಂದ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ದೇಶದ ನೆಮ್ಮದಿಗಾಗಿ ಕೋಮುವಾದಿ ಬಿಜೆಪಿಗೆ ತಕ್ಕ ಪಾಠ ಕಲಿಸುವ ಸಮಯ ಈಗ ಬಂದಿದೆ. ಜಾತ್ಯತೀತ ತತ್ವಗಳ ತಳಹದಿಯಲ್ಲಿ ಸರ್ವ ಸಮಾಜಗಳ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ಯೋಜನೆಗಳನ್ನು ರೂಪಿಸಿದೆ. ಈ ಮೂಲಕ ಎಲ್ಲ ಸಮಾಜಗಳನ್ನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಬದ್ಧತೆಯನ್ನು ಕಾಂಗ್ರೆಸ್ ಪ್ರದರ್ಶಿಸಿದೆ ಎಂದರು.
ಕಾಂಗ್ರೆಸ್ ಪಕ್ಷಕ್ಕೆ ಸಿಗುತ್ತಿರುವ ಜನಬೆಂಬಲದಿಂದ ಬಿಜೆಪಿ ಕಂಗಾಲಾಗಿದೆ. ಹೀಗಾಗಿ ಹತಾಶ ಮನೋಭಾವನೆಯಿಂದ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಇಲ್ಲ-ಸಲ್ಲದ ಟೀಕೆ ಮಾಡುತ್ತಿದ್ದಾರೆ. ಜತೆಗೆ ಭಾರತ ನಿರ್ಮಾಣ ರ್ಯಾಲಿಯ ಮೂಲಕ ರಾಹುಲ ಗಾಂಧಿ ಜನಾಭಿಪ್ರಾಯ ಸಂಗ್ರಹಿಸಿ ಜನಪರ ಪ್ರಣಾಳಿಕೆ ಪ್ರಕಟಿಸಿದ್ದು, ನುಡಿದಂತೆ ನಡೆಯುವ ಕಾಂಗ್ರೆಸ್‌ನ್ನು ಮತದಾರರು ಬೆಂಬಲಿಸಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಮೇಶ ಸೊಂಟಕ್ಕಿ, ಯುವರಾಜ ಕದಂ, ಮಲ್ಲೇಶ ಚೌಗಲೆ ಭಾಗವಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ