ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ: ಮರೇಗೌಡ ಕರೆ

Vishwanath S
Updated On : 3 Apr 2013, 11:08 am

ಹೂವಿನಹಡಗಲಿ: ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಓದಿನಲ್ಲಿ ಕ್ರಿಯಾಶೀಲರಾದಾಗ ಮಾತ್ರ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಜಿಬಿಆರ್ ಪದವಿ ಕಾಲೇಜು ಪ್ರಾಚಾರ್ಯ ಡಾ. ಆರ್. ಮರೇಗೌಡ ಹೇಳಿದರು. ಸೋಮವಾರ ಇಲ್ಲಿನ ಜಿಬಿಆರ್ ಪದವಿ ಕಾಲೇಜಿನಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ ವತಿಯಿಂದ ಆಯೋಜಿಸಲಾಗಿದ್ದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯಂತಹ ಕಾರ್ಯಕ್ರಮಗಳು ತುಂಬಾ ಸಹಕಾರಿಯಾಗಿವೆ. ಉಚಿತ ತರಬೇತಿ ದೊರೆಯುತ್ತಿರುವುದು ವಿದ್ಯಾರ್ಥಿಗಳ ಭಾಗ್ಯ ಎಂದರು. ಮೈಸೂರಿನ ರಾಷ್ಟ್ರೀಯ ತರಬೇತುದಾರ ಎಸ್. ದಿನೇಶಕುಮಾರ ಮಾತನಾಡಿ, ವಿಶ್ವವಿದ್ಯಾಲಯಗಳಲ್ಲಿ ಸಿಗುವ ಪದವಿಗಳ ಜೊತೆಗೆ ತರಬೇತಿಯ ಕೊಡುಗೆ ಅಪಾರವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಬದುಕನ್ನು ರೂಪಿಸಿಕೊಳ್ಳಬಹುದಾಗಿದೆ ಎಂದು ಸಲಹೆ ನೀಡಿದರು. ತರಬೇತುದಾರ ಕೆ.ಜಿ. ಅಲೋಕ್ ಮಾತನಾಡಿದರು. ಬಿ. ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ. ರಶ್ಮಿ ಪ್ರಾರ್ಥಿಸಿದರು. ಡಾ. ಎಚ್.ಕೆ. ಮಹೇಶ ಸ್ವಾಗತಿಸಿದರು. ಎಚ್.ಎಂ. ಗುರುಬಸವರಾಜ್ ನಿರೂಪಿಸಿದರು. ಪರಶುರಾಮ ನಾಗೋಜಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement