ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಅನಿಲ್ ಲಾಡ್‌ಗೆ ಟಿಕೆಟ್ ನೀಡಿ: ಪ್ರತಿಭಟನೆ

Vishwanath S
Updated On : 10 Apr 2013, 11:31 am

ಬಳ್ಳಾರಿ: ಅನಿಲ್ ಲಾಡ್ ಅವರಿಗೆ ಬಳ್ಳಾರಿ ನಗರ ಕ್ಷೇತ್ರದಿಂದ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅನಿಲ್ ಲಾಡ್ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿ, ಎಐಸಿಸಿಗೆ ಒತ್ತಾಯಿಸಿದರು.
ಪ್ರತಿಭಟನೆ ನಿರತರು ಮಾತನಾಡಿ, ಬಳ್ಳಾರಿಯಲ್ಲಿ ಅನಿಲ್ ಲಾಡ್ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯಗಳಿವೆ. ಪಂಪಾಪತಿ, ಆಂಜನೇಯಲು ಅವರಿಗೆ ಟಿಕೆಟ್ ನೀಡಬಾರದು. ಜನರ ಒಲವು ಅನಿಲ್ ಲಾಡ್ ಅವರ ಕಡೆಗೆ ಇದ್ದು, ಕಳೆದ ಬಾರಿ ರೆಡ್ಡಿ ಸಹೋದರರು ಹಾಗೂ ಶ್ರೀರಾಮುಲು ವಿರುದ್ಧ ತೊಡೆತಟ್ಟಿ ಹೋರಾಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯಲ್ಲಿ ರೆಡ್ಡಿಗಳಿಗೆ ಪ್ರಬಲ ಪೈಪೋಟಿ ನೀಡಲು ಸಾಧ್ಯವಾಯಿತು. ಅದಕ್ಕಾಗಿ ಈ ಬಾರಿಯು ಬಳ್ಳಾರಿ ನಗರ ಕ್ಷೇತ್ರದಿಂದ ಅನಿಲ್ ಲಾಡ್ ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ಕಳೆದ ನಾಲ್ಕೈದು ತಿಂಗಳಿಂದ ಕ್ಷೇತ್ರದಲ್ಲಿದ್ದು, ಮನೆಮನೆಗೆ ತೆರಳಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆಯ 26 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು ಬಳ್ಳಾರಿಗೆ ಬಂದು ಯಾರ ಪರವಾಗಿ ಜನರ ಒಲವು ಇದೆ ಎಂಬುದನ್ನು ಪರಿಶೀಲನೆ ಮಾಡಬೇಕು. ಬಹುತೇಕ ಬಳ್ಳಾರಿಗರು ನಗರ ಕ್ಷೇತ್ರದಲ್ಲಿ ಅನಿಲ್ ಲಾಡ್ ನಿಲ್ಲಬೇಕೆಂಬ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯದ ಮುಖಂಡರು ಆಗಮಿಸಿ ಸರ್ವೆ ಮಾಡಿ ನಿರ್ಣಯ ಕೈಗೊಳ್ಳಬೇಕು ಎಂದರು.
ದಾದಾಪೀರ್, ಸಮೀರ್, ನಹೀಮ್, ಅಮೀನ್, ಈರಣ್ಣಗೌಡ, ಹುಸೇನ್, ಕಪ್ಪಗಲ್ ರೋಡ್ ಬುಜ್ಜಿ, ಶಂಕರ್, ಹರ್ಷದ್, ದಿವಾಕರ ಸೇರಿದಂತೆ ನೂರಾರು ಜನರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement