ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬಿಎಸ್ಸಾರ್ ಕಾಂಗ್ರೆಸ್ ಮುಖಂಡ ನಿಯಾಜಿ ಕಾಂಗ್ರೆಸ್‌ಸೇರ್ಪಡೆ

Vishwanath S
Updated On : 10 Apr 2013, 11:33 am

ಹೊಸಪೇಟೆ: ಸ್ಥಳೀಯ ನಗರಸಭೆಯ ಮಾಜಿ ಸದಸ್ಯ, ಬಿಎಸ್ಸಾರ್ ಮುಖಂಡ ಎಚ್.ಎನ್. ಮಹಮ್ಮದ್ ಇಮಾಮ್ ನಿಯಾಜಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬುಧವಾರ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ವಹಾಬ್ ಅವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಹಮ್ಮದ್ ಇಮಾಮ್ ನಿಯಾಜಿ ಕಾಂಗ್ರೆಸ್ ಸೇರಿದರು.
ಕಳೆದ ಬಾರಿ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಗರಸಭೆಗೆ ಆಯ್ಕೆಯಾಗಿದ್ದರು. ಅಲ್ಲದೆ ಕಾಂಗ್ರೆಸ್ ಅಲ್ಪಸಂಖ್ಯಾಂತ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದರು. ಇತ್ತೀಚಿಗೆ ಬಿಎಸ್ಸಾರ್ ಸಂಸ್ಥಾಪಕ ಬಿ. ಶ್ರೀರಾಮುಲು ನೇತೃತ್ವದಲ್ಲಿ ಬಿಎಸ್ಸಾರ್ ಪಕ್ಷಕ್ಕೆ ಸೇರ್ಪಡೆಗೊಂಡು, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಇಚ್ಛಿಸಿದ್ದರು. ಆದರೆ ಬಿಎಸ್ಸಾರ್ ಪಕ್ಷದ ಅಭ್ಯರ್ಥಿಯಾಗಿ ರಾಣಿ ಸಂಯುಕ್ತ ಅವರ ಹೆಸರು ಘೋಷಣೆಯಾಗುತ್ತಿದ್ದಂತೆ ಮಹಮ್ಮದ್ ಇಮಾಮ್ ನಿಯಾಜಿ ಅವರು ಬಿಎಸ್ಸಾರ್‌ಗೆ ರಾಜಿನಾಮೆ ನೀಡಿ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
ಸಾಮಾಜಿಕ ನ್ಯಾಯ ಸಿಗುವುದು ಕಾಂಗ್ರೆಸ್‌ನಲ್ಲಿ ಮಾತ್ರ, ಉಳಿದ ಪಕ್ಷದಲ್ಲಿ ಸಿಗುವುದಿಲ್ಲ ಎಂದು ತಿಳಿದು ಕಾಂಗ್ರೆಸ್‌ಗೆ ಮರಳಿರುವೆ ಎಂದು ಮಹಮ್ಮದ್ ಇಮಾಮ್ ನಿಯಾಜಿ ಹೇಳಿದರು. ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ವಹಾಬ್, ತಾರಿಹಳ್ಳಿ ಶಿವಮೂರ್ತಿ, ಕೆ. ಬಡಾವಲಿ, ಖದೀರ್ ಸಾಹೇಬ್, ಡಾ. ತಾರಿಹಳ್ಳಿ ವೆಂಕಟೇಶ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement