ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸಚಿವ ಆನಂದ್‌ಸಿಂಗ್‌ರಿಂದ ವಿಶೇಷ ಪೂಜೆ, ಪಾದಯಾತ್ರೆ

Lingaraj Badiger
Updated On : 15 Apr 2013, 12:08 pm

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 14
ಕೆಲವು ದಿನಗಳಿಂದ ರಾಜಕೀಯದಿಂದ ದೂರ ಉಳಿದುಕೊಂಡಿದ್ದ ಪ್ರವಾಸೋದ್ಯಮ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಆನಂದ್ ಸಿಂಗ್ ಅವರು ಭಾನುವಾರ ಬೆಳಗ್ಗೆ ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ನಗರದ ಸಣ್ಣಕ್ಕಿ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಎರಡು ದಿನಗಳ ಹಿಂದೆ ಸಣ್ಣಕ್ಕಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ನಡೆದಿದೆ.
ಸಣ್ಣಕ್ಕಿ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಆನಂದ್ ಸಿಂಗ್ ಪಾದಯಾತ್ರೆ ಮೂಲಕ ನಗರದ ಕೊಟ್ಟೂರು ಸ್ವಾಮಿಮಠ, ಪಾದಗಟ್ಟೆ ಆಂಜಿನೇಯಸ್ವಾಮಿ ದೇವಸ್ಥಾನ, ದೊಡ್ಡ ಮಸೀದಿ, ಚರ್ಚ್, ಸಿದ್ಧಿವಿನಾಯಕ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಕಾಲ್ನಡಿಗೆಯಲ್ಲಿ ಬಿಜೆಪಿ ಕಚೇರಿಗೆ ಆಗಮಿಸಿ, ಕಾರ್ಯಕರ್ತರೊಂದಿಗೆ ಚರ್ಚಿಸಿದರು. ಸೋಮವಾರ ಬೆಳಗ್ಗೆ 12 ಗಂಟೆಗೆ ನಾಮಪತ್ರ ಸಲ್ಲಿಸುವುದಾಗಿ ಈ ಸಂದರ್ಭದಲ್ಲಿ ಆನಂದ್‌ಸಿಂಗ್ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement