ವಿಧಾನಸಭೆ ಚುನಾವಣೆ: ಪ್ರಥಮ ಬಾರಿಗೆ ಪೊಲೀಸ್ ವೀಕ್ಷಕರ ನೇಮಕ
ಬಳ್ಳಾರಿ: ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಹಿನ್ನೆಲೆಯಲ್ಲಿ ಸಾಮಾನ್ಯ ವೀಕ್ಷಕರು, ಲೆಕ್ಕ ವೀಕ್ಷಕರಲ್ಲದೆ ಇದೇ ಪ್ರಥಮ ಬಾರಿಗೆ ಪೊಲೀಸ್ ವೀಕ್ಷಕರನ್ನಾಗಿ ಮಹಾರಾಷ್ಟ್ರದ ಹಿರಿಯ ಐಪಿಎಸ್ ಅಧಿಕಾರಿ ಎಸ್.ವಿ. ರಮಾನಂದ್ರನ್ನು ಚುನಾವಣಾ ಆಯೋಗ ನಿಯೋಜಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೂ ಅವರ ಮೊಬೈಲ್ ಸಂಖ್ಯೆ-8970060083ಗೆ ನೀಡಬಹುದು. ಪ್ರತಿದಿನ ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಇವರನ್ನು ಖುದ್ದಾಗಿ ಭೇಟಿ ಮಾಡಿಯೂ ದೂರು ನೀಡಬಹುದು ಎಂದು ತಿಳಿಸಿದ್ದಾರೆ.