ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

'ಜಾತಿ ರಾಜಕಾರಣ ಮಾಡುವವರಿಗೆ ತಕ್ಕಪಾಠ ಖಚಿತ'

Mainashree
Updated On : 19 Apr 2013, 1:40 am

ತಾಂಡವಪುರ: ಜಾತಿ ರಾಜಕಾರಣ ಮಾಡುವವರಿಗೆ ವರುಣ ಕ್ಷೇತ್ರದ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದು ಕಾಂಗ್ರೆಸ್ ಯುವ ಮುಖಂಡ ರಾಕೇಶ್ ಸಿದ್ದರಾಮಯ್ಯ ಹೇಳಿದರು. ವರುಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಇಮ್ಮಾವು ಗ್ರಾಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪರ ಮನೆ- ಮನೆಗೆ ತೆರಳಿ ಪಾದಯಾತ್ರೆ ಮೂಲಕ ಮತಯಾಚಿಸಿದರು.
ಬಳಿಕ ಮಾತನಾಡಿ, ವರುಣ ಕ್ಷೇತ್ರದಲ್ಲಿ ನಮ್ಮ ತಂದೆ ಸಿದ್ದರಾಮಯ್ಯ ಅವರು ಸುಮಾರು 200 ಕೋಟಿಗಳಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಡವರಿಗೆ ಸುಮಾರು 12 ಸಾವಿರ ಆಶ್ರಯ ಮನೆ ಮಂಜೂರು ಮಾಡಿಸಿಕೊಟ್ಟಿದ್ದಾರೆ ಎಂದು ಹೇಳಿದ ಅವರು, ಈ ಬಾರಿಯೂ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಕ್ಷೇತ್ರದ ಮತದಾರರು ಸುಮಾರು 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯಾಗಲು ವರುಣ ಕ್ಷೇತ್ರದ ಮತದಾರರು ಕಾರಣರಾಗುತ್ತಾರೆ ಎನ್ನುವ ಆತ್ಮ ವಿಶ್ವಾಸ ನಮಗಿದೆ ಎಂದು ಹೇಳಿದ ಅವರು ಸಿದ್ದರಾಮಯ್ಯ ಅವರು ಹಣಕಾಸು ಮಂತ್ರಿಯಾಗಿದ್ದಾಗ ವರುಣ ನಾಲೆಗೆ ಸಾವಿರಾರು ಕೋಟಿ ರು. ಹಣ ಬಿಡುಗಡೆ ಮಾಡಿ ದೇವರಾಜ ಅರಸು ಅವರ ಕನಸನ್ನು ನನಸು ಮಾಡಿದ್ದಾರೆ. ವರುಣ ನಾಲೆಯ ಉಪಯೋಗವನ್ನು ಕೇವಲ ಒಂದೇ ಜನಾಂಗದವರು ಪಡೆಯುತ್ತಿಲ್ಲ. ಎಲ್ಲಾ ವರ್ಗದವರೂ ಅದರ ಉಪಯೋಗ ಪಡೆದುಕೊಂಡಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement