ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಹಳ್ಳಿಗಳಲ್ಲಿ ಸುರೇಶ್‌ಬಾಬು ಪ್ರಚಾರ

Lingaraj Badiger
Updated On : 26 Apr 2013, 10:55 am

ಕಂಪ್ಲಿ: ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಕಂಪ್ಲಿ ವಿಧಾನಸಭಾ ಅಭ್ಯರ್ಥಿ ಟಿ.ಎಚ್. ಸುರೇಶ್‌ಬಾಬು ಗುರುವಾರ ಕಂಪ್ಲಿ ಹೋಬಳಿಯ ಕುರುಗೋಡು ವ್ಯಾಪ್ತಿಯ ಮುಷ್ಟಿಗಡ್ಡೆ, ಕಲ್ಲುಕಂಬ, ಲಕ್ಷ್ಮೀಪುರ, ಶ್ರೀನಿವಾಸ ಕ್ಯಾಂಪ್ ಮತ್ತು ಕೆರೆಕೆರೆ ಗ್ರಾಮಗಳಿಗೆ ತೆರಳಿ ಮತ ಯಾಚನೆ ನಡೆಸಿದರು. ಬಿಎಸ್ಸಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ತಾವು ಈ ಕ್ಷೇತ್ರದಿಂದ ಪುನರಾಯ್ಕೆ ಬಯಸಿದ್ದು, ತಮ್ಮ ಐದು ವರ್ಷದ ಅವಧಿಯಲ್ಲಿ ರಸ್ತೆ, ಕುಡಿಯುವ ನೀರಿನ ಕೆರೆ, ಬಸ್ ನಿಲ್ದಾಣ, ಶಾಲಾ ಕಟ್ಟಡಗಳು, ಅಂಗನವಾಡಿ ಕೇಂದ್ರಗಳು, ಆರೋಗ್ಯ ಕೇಂದ್ರಗಳನ್ನು ನಿರ್ಮಿಸಿ ಸಾಧ್ಯವಾದಷ್ಟು ಜನಸೇವೆ ಮಾಡಿದ ತೃಪ್ತಿ ಇದೆ. ಇನ್ನಷ್ಟು ಕ್ಷೇತ್ರದಲ್ಲಿ ಸಂಚರಿಸಿ ಉಳಿದೆಲ್ಲ ರೀತಿಯ ನಾಗರಿಕ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವೂ ಸಾಗಿದೆ. ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ಆಯ್ಕೆ ಮಾಡುವಂತೆ ಮತದಾರರಲ್ಲಿ ಕೋರಿದರು. ಪ್ರಚಾರದ ವೇಳೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಹಲವಾರು ಮುಖಂಡರು ಸ್ವಇಚ್ಛೆಯಿಂದ ಬಿಎಸ್ಸಾರ್ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಪಕ್ಷದ ಮುಖಂಡರಾದ ಎರ್ರಂಗಳಿ ತಿಮ್ಮಾರೆಡ್ಡಿ, ಜಿಪಂ ಸದಸ್ಯೆ ಗಾಯತ್ರಿ, ಯುವ ಮುಖಂಡ ಪ್ರೇಮ್, ಕಾರ್ಯಕರ್ತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement