360 ಅಂಚೆ ಮತದಾರರು
ಹೊಸಪೇಟೆ: ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಂಚೆ ಮತದಾನ ಆರಂಭಗೊಂಡಿದ್ದು, ಪ್ರಗತಿಯಲ್ಲಿದೆ ಎಂದು ಸಹಾಯಕ ಆಯುಕ್ತ ಹಾಗೂ ಚುನಾವಣಾಧಿಕಾರಿ ಡಾ. ಡಿ. ಆರ್.ಅಶೋಕ್ ಹೇಳಿದರು. ಕ್ಷೇತ್ರದಲ್ಲಿ ಸುಮಾರು 360 ಅಂಚೆ ಮತದಾರರಿದ್ದು, ಈಗಾಗಲೇ ಕೆಲವರು ಅಂಚೆ ಮತ ಹಾಕಿದ್ದಾರೆ. ಏ. 28ರಿಂದ ಅಂಚೆ ಆರಂಭಗೊಂಡಿದ್ದು, ಮೇ 8ರ ಬೆಳಗ್ಗೆ 8 ಗಂಟೆ ಒಳಗಾಗಿ ಅಂಚೆ ಮತದಾನ ಮಾಡಬಹುದಾಗಿದೆ. ಡಿ. ಗ್ರೂಪ್ ನೌಕರರಿಗೆ ಇಸಿಡಿ ಮತದಾನದ ಹಕ್ಕು ನೀಡಲಾಗಿದೆ. ಯಾವುದಾದರೂ ಒಂದು ಮತಗಟ್ಟೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ, ಅದೇ ಕೇಂದ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡಲಾಗಿದೆ ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.