ಟಿ.ಬಿ. ಡ್ಯಾಂ: ವಹಾಬ್ ಮತಯಾಚನೆ
ಹೊಸಪೇಟೆ: ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್. ಅಬ್ದುಲ್ ವಹಾಬ್ ಮಂಗಳವಾರ ಕ್ಷೇತ್ರದ ಟಿ.ಬಿ. ಡ್ಯಾಂ ಸೇರಿದಂತೆ ಇತರೆ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಹಾಬ್, ಕಳೆದ ಎರಡು ಚುನಾವಣೆಗಳಲ್ಲಿ ಕ್ಷೇತ್ರದಲ್ಲಿ ಸೋತಿದ್ದೇನೆ. ಈ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಹೀಗಾಗಿ ತಮಗೆ ಮತ ನೀಡಿ ಎಂದು ಮತದಾರರಲ್ಲಿ ವಿನಂತಿಸಿಕೊಂಡರು. ಟಿ.ಬಿ. ಡ್ಯಾಂ, ನಿಶಾನಿ ಕ್ಯಾಂಪ್, ವಂಕಾಯಿ ಕ್ಯಾಂಪ್ ಸೇರಿದಂತೆ ಹೊಸಪೇಟೆ ನಗರದ ಕೆಲ ವಾರ್ಡ್ಗಳಲ್ಲಿ ಸಂಚರಿಸಿ ಮತಯಾಚನೆ ಮಾಡಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ನಗರಸಭಾ ಸದಸ್ಯರು ಸೇರಿದಂತೆ ಇತರರು ಇದ್ದರು.