ನಿವೃತ್ತ ಶಿಕ್ಷಕ ಕೆ.ಎಂ. ಚನ್ನಬಸಯ್ಯರ ಬೀಳ್ಕೊಡುಗೆ
ಬಳ್ಳಾರಿ: ನಗರದ ಸಿಲ್ವರ್ ಜೂಬ್ಲಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 30 ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕೆ.ಎಂ. ಚನ್ನಬಸವಯ್ಯ ಅವರಿಗೆ ಬುಧವಾರ ಬೀಳ್ಕೊಡಲಾಯಿತು. ಶಾಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಹೊರಹೊಮ್ಮಲು ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಕೆ.ಎಂ. ಚನ್ನಬಸವಯ್ಯನವರ ಕೈಯಲ್ಲಿ ಪಳಗಿದ ಸಾಕಷ್ಟು ವಿದ್ಯಾರ್ಥಿಗಳು ಇಂದು ವೈದ್ಯರು, ಎಂಜಿನಿಯರ್ ಆಗಿದ್ದಾರೆ. ಹೀಗಾಗಿ ಇವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
--