ಮಹಿಳೆ ಆತ್ಮಹತ್ಯೆ
ಬಳ್ಳಾರಿ: ಜೀವನದಲ್ಲಿ ಜಿಗುಪ್ಸೆಗೊಂಡು ಗೃಹಿಣಿಯೋರ್ವಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎರ್ರಿತಾತಾ ಕಾಲೋನಿಯಲ್ಲಿ ನಡೆದಿದೆ. ಮೃತಳು ಕಾಲೋನಿಯ ಶ್ಯಾಮಲಾ (55). ಈಕೆ ತನಗೆ ಮಕ್ಕಳಾಗಿಲ್ಲ ಎಂದು ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರ ಸಂಜೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ಸೋಮವಾರ ಸಾವನ್ನಪ್ಪಿದ್ದಾಳೆ. ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಡಿಕ್ಕಿ: ಬೈಕ್ ಸವಾರ ಸಾವು
ಬಳ್ಳಾರಿ: ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಸಂಡೂರು ತಾಲೂಕಿನ ಬೂದುಗಣವಿ ಬಳಿ ನಡೆದಿದೆ. ಮೃತನನ್ನು ತಾಲೂಕಿನ ವಿಠಲಾಪುರದ ಎಚ್. ರಾಮಲಿಂಗಪ್ಪ (22). ಈತನು ವಿಠಲಾಪುರಕ್ಕೆ ಬೈಕ್‌ನಲ್ಲಿ ಹೋಗುತ್ತಿರುವಾಗ ಎದುರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಕೂಡಲೇ ಈತನನ್ನು ಸಂಜೀವಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಹೆಚ್ಚಿನ ಚಿಕಿತ್ಸೆಗೆ ವಿಮ್ಸ್‌ಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾನೆ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
--