ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬಾಲಕಾರ್ಮಿಕರ ಬಳಕೆ: ಕ್ರಮಕ್ಕೆ ಚಿಂತನೆ

Vishwanath S
Updated On : 9 Aug 2013, 11:24 am

ಬಳ್ಳಾರಿ: ಹೂವಿನಹಡಗಲಿ ತಾಲೂಕಿನ ನಂದಿಹಳ್ಳಿ ಗಾಪಂ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಕೆಲಸದಲ್ಲಿ ಬಾಲ ಕಾರ್ಮಿಕರನ್ನು ತೊಡಗಿಸಿಕೊಂಡಿರುವ ಕುರಿತು ಪರಿಶೀಲನೆ ಮಾಡಿ, ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ ತಿಳಿಸಿದರು.
ಗುರುವಾರ ಜಿಪಂ ಕೆಡಿಪಿ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಖಾತ್ರಿ ಯೋಜನೆಯಡಿ 5 ಬಾಲ ಕಾರ್ಮಿಯನ್ನು ತೊಡಗಿಸಿಕೊಂಡಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಪರಿಶೀಲನೆ ಮಾಡಲಾಗುತ್ತದೆ, ವಾಸ್ತವತೆಯನ್ನು ಅರಿತು, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗುತ್ತದೆ ಎಂದರು.
ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ನಡೆಯುತ್ತಿರುವ ಗೊಂದಲಗಳ ಕುರಿತು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಅವರ ಗಮನಕ್ಕೆ ತರಲಾಗಿದೆ. ಇನ್ನು ಉನ್ನತ ಶಿಕ್ಷಣಾಧಿಕಾರಿ ರಜನೀಶ್ ಗೋಯಲ್ ಅವರ ಗಮನಕ್ಕೂ ತರಲಾಗಿದೆ, ದೇಶಪಾಂಡೆ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ  ತನಿಖೆ ಕೈಗೊಂಡು ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ತಿಳಿಸಿದರು.
ಈಗಾಗಲೇ ಹೈದಾರಾಬಾದ್ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಸಂವಿಧಾನದ 371 ಜೆ ತಿದ್ದುಪಡಿ ಕುರಿತ ಸಮಗ್ರ ವರದಿಯನ್ನು ಸಚಿವ ಸಂಪುಟದ ಉಪಸಮಿತಿಯು ಮುಖ್ಯಮಂತ್ರಿಗಳಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿ ಕೊಡಲಾಗುತ್ತದೆ. ಹೈದಾರಾಬಾದ್ ಕರ್ನಾಟಕ ವ್ಯಾಪ್ತಿಯ ಗಡಿನಾಡ ಕನ್ನಡಿಗರು, ರಜಾಕ್ ಆಳ್ವಿಕೆಯ ಕಾಲದಲ್ಲಿ ಹೈಕದಲ್ಲಿರುವ ಕನ್ನಡಿಗರನ್ನು ಒಳಗೊಂಡಂತೆ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement