ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸಂಭ್ರಮದ ರಂಜಾನ್ ಆಚರಣೆ

Vishwanath S
Updated On : 10 Aug 2013, 11:46 am

ಹೂವಿನಹಡಗಲಿ: ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಸೌಹಾರ್ದ ಮತ್ತು ಸಮಾನತೆಯ ಸಂದೇಶ ಸಾರುವ ಈದ್ ಉಲ್ ಫಿತರ್ (ರಂಜಾನ್) ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಶುಕ್ರವಾರ ಬೆಳಗ್ಗೆ ಪಟ್ಟಣದ ಜಾಮಿಯಾ ಮಸ್ಜೀದ್‌ನಿಂದ ಮುಖ್ಯ ರಸ್ತೆಯ ಮೂಲಕ ಮೆರವಣಿಗೆ ಹೊರಟು ಈದ್ಗಾ ಮೈದಾನದಲ್ಲಿ ಸೇರಿದರು. ಅನಂತರದಲ್ಲಿ ಅಲ್ಲಿಯ ಖಾಜಿ ಹಾಗೂ ಮೌಲ್ವಿಗಳು ಧಾರ್ಮಿಕ ವಿಧಿ ವಿಧಾನಗಳ ಜತೆಗೆ ಸಾಮೂಹಿಕ ಪ್ರಾರ್ಥನೆ ಮಾಡಿದರು.
ಕಾರ್ಮಿಕ, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಮುಸ್ಲಿಂ ಬಾಂಧವರೊಂದಿಗೆ ಈದ್ಗಾ ಮೈದಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸುವ ಮೂಲಕ ಮುಸ್ಲಿಂ ಸಮಾಜದ ಗಣ್ಯರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡು ನಾಡಿನ ಒಳಿತಿಗಾಗಿ ತಿಂಗಳು ಕಾಲ ಶ್ರದ್ಧಾ ಭಕ್ತಿಯಿಂದ ಉಪವಾಸ ವ್ರತ ಆಚರಿದ ತಮಗೆಲ್ಲ ಜೀವನದಲ್ಲಿ ಸುಖ, ಶಾಂತಿ ಲಭಿಸಲಿ. ಎಲ್ಲ ಕಷ್ಟ-ನಷ್ಟಗಳು ದೂರವಾಗಿ ನಿಮ್ಮ ಬದುಕು ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ ಚಿದಾನಂದ, ಮುಖಂಡರಾದ ಅರವಳ್ಳಿ ವೀರಣ್ಣ, ಅಂಜುಮನ್ ಕಮಿಟಿ ಅಧ್ಯಕ್ಷ ಸಿ. ಚಾಂದಸಾಬ್, ಎಪಿಎಂಸಿ ಅಧ್ಯಕ್ಷ ವಾರದ ಗೌಸ್‌ಮೊಹಿದ್ದೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement