ಆರ್. ವೆಂಕಣ್ಣ ನಿಧನಕ್ಕೆ ಸಂತಾಪ
ಬಳ್ಳಾರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಆರ್.ವೆಂಕಣ್ಣ ಅವರ ನಿಧನಕ್ಕೆ ಜಿಲ್ಲಾ ಮತ್ತು ತಾಲೂಕಿನ ಪದಾಧಿಕಾರಿಗಳು ಶಾಂತಿ ಕೋರಿ ಸಂತಾಪ ಸೂಚಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಬಳ್ಳಾರಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಸಂತಾಪ ಸೂಚಕ ಸಭೆಯಲ್ಲಿ ದಿವಂಗತ ಆರ್. ವೆಂಕಣ್ಣನವರ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿ, ಮೌನಾಚರಿಸಲಾಯಿತು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತರಾಗಿ ಸತತ 30 ವರ್ಷಗಳ ಕಾಲ ಸೇವೆ ಸಲ್ಲಿಸಿ, ಆ. 9ರಂದು ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಇವರ ಸೇವೆಯು ಸಂಸ್ಥೆಗೆ ಅನನ್ಯವಾದದ್ದು ಎಂದು ಸ್ಮರಿಸಿದರು.
ಇವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗಕ್ಕೆ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು.