ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಆರಾಧನಾ ಮಹೋತ್ಸವ

Lingaraj Badiger
Updated On : 16 Aug 2013, 11:52 am

ಹಗರಿಬೊಮ್ಮನಹಳ್ಳಿ: ಶ್ರೀರಾಘವೇಂದ್ರ ಸ್ವಾಮಿಗಳವರ 342ನೇ ವರ್ಷದ ಆರಾಧನಾ ಮಹೋತ್ಸವ ಆ. 21ರಿಂದ 23ರ ವರೆಗೆ ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದಲ್ಲಿನ ರಾಘವೇಂದ್ರಸ್ವಾಮಿ ಮಠದಲ್ಲಿ ಜರುಗಲಿದೆ.
21ರಂದು ಪೂರ್ವಾರಾಧನೆ, 22ರಂದು ಗುರುವಾರ ಮಧ್ಯಾರಾಧನೆ ಹಾಗೂ 23ರಂದು ಉತ್ತರಾಧನೆ ಜರುಗಲಿದೆ.
ಮೂರು ದಿನಗಳ ಕಾಲ ಬೆಳಗ್ಗೆ 5 ಗಂಟೆಗೆ ಸುಪ್ರಭಾತ ಸೇವೆ ನಡೆಯಲಿದೆ. ರಾತ್ರಿ 8ಕ್ಕೆ ಮಹಾ ಮಂಗಳಾರತಿ, ತೊಟ್ಟಿಲು ಸೇವೆ, ಫಲಮಂತ್ರಾಕ್ಷತೆ ಕಾರ್ಯಕ್ರಮಗಳು ನಡೆಯಲಿವೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಯರ ಕೃಪೆಗೆ ಪಾತ್ರರಾಗುವಂತೆ ಹಾಗೂ ಅನ್ನದಾನಕ್ಕೆ ಬೇಕಾಗುವ ಸಾಮಗ್ರಿಗಳನ್ನು ದಾನವಾಗಿ ನೀಡಲು ಭಕ್ತರಲ್ಲಿ ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement