ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ಗೆ ಚಾಲನೆ

Mainashree
Updated On : 18 Aug 2013, 12:04 pm

ಬಳ್ಳಾರಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಹಾಗೂ ಜಿಲ್ಲಾ ಘಟಕದ ವತಿಯಿಂದ ನಗರದ ಪೊಲೀಸ್ ಜಿಮಖಾನದಲ್ಲಿ ಡಾ. ಸೋಮಣ್ಣ ಸ್ಮರಣಾರ್ಥ 2 ದಿನಗಳ ಕಾಲ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಶನಿವಾರ ಚಾಲನೆ ನೀಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಚೇತನ್ ಸಿಂಗ್ ರಾಥೋಡ್ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ನಂತರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಐಎಂಎ ನಿಯೋಜಿತ ರಾಜ್ಯಾಧ್ಯಕ್ಷ ಡಾ. ಯೋಗಾನಂದ ರೆಡ್ಡಿ, ಜಿಲ್ಲಾ ಘಟಕದ ಪದಾಧಿಕಾರಿಗಳಾದ ಡಾ. ಅಜೀತ್ ಕುಲಕರ್ಣಿ, ಡಾ. ಮರಿರಾಜ್, ಡಾ. ಅರವಿಂದ ಪಾಟೀಲ, ಡಾ. ಸೋಮನಾಥ, ಡಾ. ಶಿವನಾಯಕ ಪಾಲ್ಗೊಂಡಿದ್ದರು. ನಂತರ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಮಾಜಿ ರಾಷ್ಟ್ರಾಧ್ಯಕ್ಷ ಡಾ.ಜಿ.ಕೆ. ರಾಮಚಂದ್ರಪ್ಪ, ಐಎಂಎ ರಾಜ್ಯ ಘಟಕದ ಅಧ್ಯಕ್ಷ ಡಾ.ವೈ.ಎಂ. ಸುಧಾಕರ್ ಅವರು ಪುರುಷ ಟೂರ್ನಮೆಂಟ್‌ಗೆ ಚಾಲನೆ ನೀಡಿದರು. ಐಎಂಎ ದ ಎಸ್.ಡಿ. ಮಹಾಬಲೇಶ ಮಹಿಳಾ ಮತ್ತು ಮಕ್ಕಳ ಟೂರ್ನಮೆಂಟ್‌ಗೆ ಚಾಲನೆ ನೀಡಿದರು. ರಾಜ್ಯದ 17 ಜಿಲ್ಲೆಗಳಿಂದ 130ಕ್ಕೂ ಹೆಚ್ಚು ಸ್ಪರ್ಧಾಳುಗಳು ಆಗಮಿಸಿದ್ದರು. ಡಾ. ಅಜಿತ್ ಕುಲಕರ್ಣಿ ಸ್ವಾಗತಿಸಿದರು. ಡಿ. ಸುಬ್ಬಣ್ಣ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement