ಮಟ್ಕಾ ಅಡ್ಡೆ ಮೇಲೆ ದಾಳಿ: 3 ಬಂಧನ
ಬಳ್ಳಾರಿ: ಜಿಲ್ಲೆಯ ಸಂಡೂರು ಪಟ್ಟಣದ 14ನೇ ವಾರ್ಡಿನಲ್ಲಿ ಮಟ್ಕಾ ಜೂಜಾಟದ ಅಡ್ಡೆ ಮೇಲೆ ಬಳ್ಳಾರಿ ಡಿಸಿಐಬಿ ಪೊಲೀಸರು ದಾಳಿ ಮಾಡಿ, ಆರೋಪಿಗಳನ್ನು ಬಂಧಿಸಿ, ನಗದು ವಶಪಡಿಸಿಕೊಂಡಿದ್ದಾರೆ.
ಸಂಡೂರು ಪಟ್ಟಣದ 14ನೇ ವಾರ್ಡಿನ ಏರ್‌ಟೆಲ್ ಟವರ್ ಸಮೀಪ ಮಟ್ಕಾ ಜೂಜಾಟ ಆಡುತ್ತಿದ್ದವರ ಮೇಲೆ ದಾಳಿ ಮಾಡಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ರು. 20,000, 7 ಮೊಬೈಲ್, 4 ಮಟ್ಕಾ ಪಟ್ಟಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಲೆಟ್ ಕಳ್ಳತನ: ದೂರು
ಬಳ್ಳಾರಿ: ಸ್ಥಳೀಯ ಗಾಂಧಿನಗರದಲ್ಲಿ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಮೋಟರ್ ಸೈಕಲ್ ಒಂದು ಕಳುವಾಗಿದೆ.
ಗಾಂಧಿನಗರದ ರವಿಕುಮಾರ್ ಎಂಬವರು ತಮ್ಮ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಕಂಪನಿಯ ಬುಲೆಟ್ ಮೋಟಾರ್ ಸೈಕಲ್ (ನಂ. ಕೆ.ಎ 34 ಇಎ-9948) ಕಳ್ಳರು ಕಳ್ಳತನ ಮಾಡಿದ್ದಾರೆ ಎಂದು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.