ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ವಸತಿ ಶಾಲೆ ಸ್ಥಾಪನೆ ಸ್ತುತ್ಯಾರ್ಹ

Lingaraj Badiger
Updated On : 19 Aug 2013, 11:46 am

ಹೊಸಪೇಟೆ: ಶಾಲೆ ಬಿಟ್ಟ ಮಕ್ಕಳನ್ನು ವಸತಿ ಶಾಲೆಗೆ ಸೇರಿಸಲು ಕಸ್ತೂರಬಾ ವಸತಿ ಶಾಲೆಯನ್ನು ಸ್ಥಾಪಿಸಿ ಸರ್ಕಾರ ಸ್ತುತ್ಯಾರ್ಹ ಕೆಲಸ ಮಾಡಿದೆ. ಕಸ್ತೂರಬಾ ವಸತಿ ಶಾಲೆಗೆ ಈಗ ನೂತನ ಕಟ್ಟಡ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಹೇಳಿದರು.
ತಾಲೂಕಿನ ಕಮಲಾಪುರದ ಕಸ್ತೂರಬಾ ವಸತಿ ಶಾಲೆಯಲ್ಲಿ ಶನಿವಾರ ರಾಷ್ಟ್ರೀಯ ಮಾಧ್ಯಮ ಶಿಕ್ಷಣ ಅಭಿಯಾನದಡಿ ವಸತಿ ನಿಲಯಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕಸ್ತೂರಬಾ ಶಾಲೆಯ ನೂತನ ಕಟ್ಟಡ ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವುದು ಶ್ಲಾಘನೀಯ ಕಾರ್ಯ. ಕ್ಷೇತ್ರದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಶಾಸಕ ಆನಂದ್ ಸಿಂಗ್ ಅವರು ಉತ್ತಮ ಯೋಜನೆಗಳನ್ನು ರೂಪಿಸುತ್ತಾ, ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಅವಿರತ ಶ್ರಮ ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸಪೇಟೆ ಉದ್ಯಮಿ ಸಂತೋಷ ಸಿಂಗ್, ಶಾಸಕ ಆನಂದ್ ಸಿಂಗ್ ಅವರ ಪುತ್ರ ಸಿದ್ಧಾರ್ಥ ಸಿಂಗ್, ಕಮಲಾಪುರ ಪಪಂ ಮಾಜಿ ಅಧ್ಯಕ್ಷ, ಸದಸ್ಯರು, ಮಾಜಿ ಸದಸ್ಯರು, ಪಪಂ ಮುಖ್ಯಾಧಿಕಾರಿ ಎಂ.ಎ. ನೂರುಲ್ಲಾ ಖಾನ್, ಶಿಕ್ಷಣ ಇಲಾಖೆಯ ಬಿಆರ್‌ಸಿ ಶರಣಪ್ಪ ವಟಗಲ್, ತಾಲೂಕು ಪಂಚಾಯಿತಿ ಪ್ರಭಾರಿ ಇಒ ಶರಣಪ್ಪ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement