ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಮೈನ್ಸ್ ಲಾರಿ ಡಿಕ್ಕಿ: 5 ವಿದ್ಯುತ್ ಕಂಬಗಳು ನೆಲಕ್ಕೆ

Mainashree
Updated On : 20 Aug 2013, 11:21 am

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಆ. 19
ಮೈನ್ಸ್ ಲಾರಿಯೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿ ಬಿದ್ದು, ಸಂಚಾರ ಅಸ್ತವ್ಯಸ್ತಗೊಂಡ ಘಟನೆ ನಗರದ ಜಂಬುನಾಥ ರಸ್ತೆಯ ಡಾನ್ ಬಾಸ್ಕೊ ಶಾಲೆ ಸಮೀಪದಲ್ಲಿ ನಡೆದಿದೆ.
ನಗರದ ಮಧ್ಯ ಭಾಗದ ರಸ್ತೆಯಲ್ಲಿ ಮೈನ್ಸ್ ಲಾರಿಗಳು ಸಂಚಾರ ಮಾಡುತ್ತಿರುವಾಗ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳಿಗೆ ಡಿಕ್ಕಿ ಹೊಡೆದಿದೆ. ಸುಮಾರು 5 ವಿದ್ಯುತ್ ಕಂಬಗಳು ರಸ್ತೆಯಲ್ಲಿ ಮುರಿದು ಬಿದ್ದಿವೆ. ಡಿಕ್ಕಿ ಹೊಡೆದ ಕ್ಷಣಾರ್ಧದಲ್ಲೇ ಹಿಂದಿನಿಂದ ಮದುವೆ ಕಾರ್ಯಕ್ರಮಕ್ಕೆ ತೆರಳುವ ಲಾರಿಗೆ ವಿದ್ಯುತ್ ತಂತಿಗಳು ತಾಗುವುದು ಸ್ವಲ್ಪದರಲ್ಲೇ ತಪ್ಪಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ವಿದ್ಯುತ್ ಕಂಬಗಳು ರಸ್ತೆ ಮೇಲೆ ಮುರಿದು ಬಿದ್ದದ್ದರಿಂದ ರಸ್ತೆಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದ್ದರಿಂದ ಸ್ಥಳೀಯ ನಿವಾಸಿಗಳು ಮೈನ್ಸ್ ಲಾರಿಗಳನ್ನು ತಡೆದು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಮೈನ್ಸ್ ಲಾರಿಗಳು ನಗರದ ಮಧ್ಯದ ರಸ್ತೆಯಲ್ಲಿ ಸಂಚರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಅನಂತರ ಪ್ರತಿಭಟನೆ ವಾಪಾಸ್ ಪಡೆಯಲಾಯಿತು.
ವಿದ್ಯುತ್ ಕಂಬಗಳು ಮುರಿದು ಬಿದ್ದರಿಂದ ಕೆಲ ಕಾಲ ಜಂಬುನಾಥ ರಸ್ತೆಯ ಪ್ರದೇಶದಲ್ಲಿ ವಿದ್ಯುತ್ ಕಡಿತಗೊಂಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement