ಸಾಂಸ್ಕೃತಿಕ ಕಾರ್ಯಕ್ರಮ
ಬಳ್ಳಾರಿ: ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಗ್ರಾಮೀಣ ಡಿವೈಎಸ್‌ಪಿ ರುದ್ರಮುನಿ ತಿಳಿಸಿದರು. ನಗರದ ರಾಘವಕಲಾ ಮಂದಿರದಲ್ಲಿ ಶಿವಸಾಯಿ ಕ್ಯಾಟರಿಂಗ್ ವತಿಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ, ನಂತರ ಅವರು ಮಾತನಾಡಿದರು. ನಂತರ ವಿವಿಧ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಭರತನಾಟ್ಯ, ದೇಶಭಕ್ತಿ ಗೀತೆ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ಕೊನೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಶಿವಸಾಯಿ ಕ್ಯಾಟರಿಂಗ್‌ನ ರಾಧಕೃಷ್ಣ ಶೆಟ್ಟಿ, ಸಾಗರ್, ಕಲಾಭಿಮಾನಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.