ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ತಾಲೂಕು ಕ್ರೀಡಾಂಗಣ, ಜಿಮ್‌ಗೆ ಆಧುನಿಕ ಸ್ಪರ್ಶ

Lingaraj Badiger
Updated On : 24 Aug 2013, 12:14 pm

ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಆ. 23
ಪಟ್ಟಣದ ತಾಲೂಕು ಕ್ರೀಡಾಂಗಣ ಹಾಗೂ ಜಿಮ್ ವ್ಯವಸ್ಥೆಗೆ ಹೊಸ ಆಧುನಿಕ ಸ್ಪರ್ಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ ಭರವಸೆ ನೀಡಿದ್ದಾರೆ.
ಪಟ್ಟಣದ ಜಿಬಿಆರ್ ಕಾಲೇಜು ಆವರಣದಲ್ಲಿ ಪದವಿ ಪೂರ್ವ ಹಾಗೂ  ವೃತ್ತಿ ಶಿಕ್ಷಣ ಇಲಾಖೆ ಹಾಗೂ ವೀರಶೈವ ವಿದ್ಯಾವರ್ಧಕ ಸಂಘ ಇವರ ಸಹಯೋಗದಲ್ಲಿ ಶುಕ್ರವಾರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗಳು ಎಂದ ಕೂಡಲೇ ವಿದ್ಯಾರ್ಥಿಗಳನ್ನು ಒತ್ತಡದಲ್ಲಿ ಸಿಲುಕಿಸದೇ ಶಾಲಾ ಅವಧಿಯಲ್ಲೇ ಸರಿಯಾಗಿ ಅಭ್ಯಾಸ ಮಾಡಿಸಬೇಕು. ದೈಹಿಕ ಶಿಕ್ಷಕರು ಸರಿಯಾಗಿ ಕ್ರೀಡೆಗಳನ್ನು ಆಡಿಸುವ ಮೂಲಕ ಪ್ರತಿಭೆಗಳನ್ನು ಹೊರಗೆ ತರುವ ಕೆಲಸ ಮಾಡಬೇಕು. ಕಾಟಾಚಾರಕ್ಕೆ ಕ್ರೀಡೆಗಳನ್ನು ನಡೆಸದೇ, ಜವಾಬ್ದಾರಿ ಮತ್ತು ಕರ್ತವ್ಯ ಅರಿತು ಕ್ರೀಡೆಗಳನ್ನು ಆಡಿಸಬೇಕು ಎಂದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಐಗೋಳ್ ಚಿದಾನಂದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ರೀಡಾ ಧ್ವಜರೋಹಣ ಮಾಡಿ ಮಾತನಾಡಿದರು. ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕ ಎನ್.ಮಂಜುನಾಥ ಕ್ರೀಡಾ ಜ್ಯೋತಿ ಬೆಳಗಿಸಿದರು. ಸೋಮಶೇಖರ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ತಾಪಂ ಉಪಾಧ್ಯಕ್ಷೆ ಪ್ರೇಮಾ, ಎಪಿಎಂಸಿ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪರಮೇಶ್ವರಪ್ಪ, ಅರವಳ್ಳಿ ವೀರಣ್ಣ, ಅಟವಾಳಿಗಿ ಕೊಟ್ರೇಶ, ಕೋಡಿಹಳ್ಳಿ ಮುದುಕಪ್ಪ, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಸಿ.ಮೋಹನರೆಡ್ಡಿ, ಗಡಗಿ ವೀರಣ್ಣ, ಹಲಗೇರಿ ಸೋಮಶೇಖರ, ದಾನಿಗಳಾದ ವೇಣುಗೋಪಾಲ ಶ್ರೇಷ್ಠಿ, ಪದವಿ ಕಾಲೇಜು ಪ್ರಾಚಾರ್ಯ ಡಾ. ಎ.ಮರೇಗೌಡ, ಪಿಯು ಪ್ರಾಚಾರ್ಯ ಡಾ. ಎ.ಎಂ. ರಾಜಶೇಖರಯ್ಯ ಸೇರಿದಂತೆ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement